ಅಕ್ರಮ ಹಣ ವರ್ಗಾವಣೆ ಕೇಸ್‌ – ʻಕೈʼ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ

Public TV
1 Min Read

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್‌ ಆ್ಯಪ್‌ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ (Veerendra Puppy) ಅವರನ್ನ ಮತ್ತೆ 6 ದಿನ ಇಡಿ (ED – ಜಾರಿ ನಿರ್ದೇಶನಾಲಯ) ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ.

ವಾದ ಪ್ರತಿವಾದಗಳನ್ನು ಆಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (People’s Representatives Court) ಇಂದು ಕಸ್ಟಡಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಅವರಗೆ 24 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಬೇಕು ಎಂದು ಕೋರ್ಟ್‌  ಸೂಚಿಸಿದೆ. ಇದನ್ನೂ ಓದಿ: ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

veerendra puppy 2 1

ಇದರೊಂದಿಗೆ ಶುದ್ಧವಾದ ಆಹಾರ, ನೀರು, ಮೆಡಿಸಿನ್ ನೀಡಬೇಕು. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. 30 ನಿಮಿಷ ವಕೀಲರ ಭೇಟಿಗೆ ಅವಕಾಶ ನೀಡಬೇಕು, ರಾತ್ರಿ 9 ಗಂಟೆಯ ತನಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್‌ ಹೇಳಿದೆ. ಇದನ್ನೂ ಓದಿ: ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

ವಿರೇಂದ್ರ ಪಪ್ಪಿ ಇಡಿ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಡಿ ಪರ ವಕೀಲ ಪ್ರಮೋದ್ ಚಂದ್ರ ವಾದ ಮಂಡಿಸಿದ್ರೆ, ಆರೋಪಿ ವಿರೇಂದ್ರ ಪಪ್ಪಿ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರು. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

veerendra puppy 5

ಏನಿದು ಪ್ರಕರಣ?
ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪ ಪಪ್ಪಿ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಇದನ್ನಾಧರಿಸಿ ಇಡಿ ದಾಳಿ (ED Raid) ನಡೆಸಿತ್ತು.

Share This Article