ಭಾರತವನ್ನು ರಾಷ್ಟ್ರವೆಂದು ಪರಿಗಣಿಸಲು ಕಾಂಗ್ರೆಸ್ ಸಿದ್ಧವಿಲ್ಲ: ಮೋದಿ

Public TV
2 Min Read

ಡೆಹ್ರಾಡೂನ್: ಭಾರತವನ್ನು ರಾಷ್ಟ್ರವೆಂದು ಪರಿಗಣಿಸಲು ಕಾಂಗ್ರೆಸ್ ಸಿದ್ಧವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಉತ್ತರಾಖಂಡದಲ್ಲಿನ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಕೈಗೊಂಡಿರುವ ವಿವಿಧ ಉಪಕ್ರಮಗಳನ್ನು ಎತ್ತಿ ಹಿಡಿದರು. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

ಭಾರತವು ಒಂದೇ, ಈ ದೇಶವು ಒಂದೇ. ಇದು ರಾಷ್ಟ್ರವಲ್ಲ ಎಂದು ಕಾಂಗ್ರೆಸ್ ಹೇಳುತ್ತಿದೆ. ಭಾರತವನ್ನು ರಾಷ್ಟ್ರ ಎಂದು ಪರಿಗಣಿಸಲು ಕಾಂಗ್ರೆಸ್ ಸಿದ್ಧವಿಲ್ಲ. ಆದರೆ ದೇವಭೂಮಿ ಉತ್ತರಾಖಂಡದ ‘ದೇವತಾವ’ (ದೈವಿಕತೆ)ಯನ್ನು ಬಿಜೆಪಿ ಭದ್ರಪಡಿಸಲಿದೆ ಎಂದು ಪ್ರತಿಜ್ಞೆ ಮಾಡಿದರು.

ಉತ್ತರಾಖಂಡ ಸರ್ಕಾರವು ಕೋವಿಡ್-19 ಸಾಂಕ್ರಾಮಿಕ (ಉಚಿತ ಪಡಿತರ ಮತ್ತು ಇತರ ಯೋಜನೆಗಳ ರೂಪದಲ್ಲಿ) ಬಡವರಿಗೆ ಬೆಂಬಲ ನೀಡಿರುವುದನ್ನು ತಿಳಿಸಿದ ಅವರು, ಒಂದು ವೇಳೆ ಕಾಂಗ್ರೆಸ್ ಆಡಳಿತದಲ್ಲಿದ್ದರೆ ಪರಿಸ್ಥಿತಿ ತುಂಬಾ ಭಿನ್ನವಾಗಿರುತ್ತಿತ್ತು. ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರೆ ಭ್ರಷ್ಟಾಚಾರ ನಡೆಯುತ್ತಿತ್ತು ಎಂದು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರವು ಉತ್ತರಾಖಂಡದ ಅಭಿವೃದ್ಧಿಗೆ ಯಾವುದೇ ಕಲ್ಲನ್ನು ಹಾಕುತ್ತಿಲ್ಲ. ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆಯೂ ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿಗೆ ದಶಕದ ಸಂಭ್ರಮ – ಶಾಂತಿಧಾಮಕ್ಕೆ 25 ಲಕ್ಷ ರೂ. ವಿತರಣೆ

ನಾವು ಇಲ್ಲಿ ಹೆದ್ದಾರಿಗಳು ಮತ್ತು ವಿಮಾನ ನಿಲ್ದಾಣಗಳನ್ನು ನಿರ್ಮಿಸುತ್ತಿದ್ದೇವೆ. ‘ಪರ್ವತ್ ಮಾಲಾ’ ಅಡಿಯಲ್ಲಿ, ರಾಷ್ಟ್ರೀಯ ರೋಪ್‍ವೇ ಅಭಿವೃದ್ಧಿ ಕಾರ್ಯಕ್ರಮದ ಮೂಲಕ ದೂರದ ಪ್ರದೇಶಗಳಲ್ಲಿ ರೋಪ್‍ವೇ ಸಂಪರ್ಕವನ್ನು ಒದಗಿಸಲಾಗುವುದು. ಹೊಸ ವೈದ್ಯಕೀಯ ಕಾಲೇಜುಗಳು ಮತ್ತು ಪದವಿ ಕಾಲೇಜುಗಳನ್ನು ತೆರೆಯಲಾಗುವುದು ಎಂದು ಭರವಸೆ ನೀಡಿದ್ದಾರೆ.


Narendra Modi, Uttarakhand, Congress

Share This Article
Leave a Comment

Leave a Reply

Your email address will not be published. Required fields are marked *