40 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚೆ ನಡೆಯುತ್ತಿದೆ: ಜಾರಕಿಹೊಳಿ ಬಾಂಬ್

Public TV
1 Min Read

ಚಿಕ್ಕೋಡಿ: 40 ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ನಿಟ್ಟಿನಲ್ಲಿ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಿರುವುದು ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಕುರಿತು ಬೆಂಗಳೂರಿನಲ್ಲಿ ವರಷ್ಠರ ಹಂತದಲ್ಲಿ ಚರ್ಚೆ ನಡೆದಿರೋದು ನಿಜ, ಯಾರು ಎಷ್ಟು ಜನ ಬರ್ತಾರೆ ಅಂತ ನನಗೆ ಮಾಹಿತಿ ಇಲ್ಲ. ಆದರೆ ಶಾಸಕರು ಕಾಂಗ್ರೆಸ್‍ಗೆ ಬರುವ ಬಗ್ಗೆ ಚರ್ಚೆ ಆಗಿದೆ ಎಂದರು. ಇದನ್ನೂ ಓದಿ: ಬೆಳಗಾವಿ ಲೋಕಸಭೆಯಿಂದ ನನ್ನ ಸ್ಪರ್ಧೆ ನಿಶ್ಚಿತ : ಸತೀಶ್ ಜಾರಕಿಹೊಳಿ

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಮಾಜಿ ಶಾಸಕ ಸಂಜಯ್ ಪಾಟೀಲ್ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿದ ಜಾರಕಿಹೊಳಿ, ಸಂಜಯ್ ಪಾಟೀಲ್ ಇಂತಹ ಹೇಳಿಕೆಗಳನ್ನು ಕೊಡುವುದು ಹೊಸದೇನಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ. ಬೆಳಗಾವಿ ಜಿಲ್ಲೆಯ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಅಂತಿಮವಾಗಿ ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು: ಸುಧಾಕರ್

Share This Article
Leave a Comment

Leave a Reply

Your email address will not be published. Required fields are marked *