ಎಐಸಿಸಿ ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್, ರಮ್ಯಾ ಸ್ಪಷ್ಟನೆ

By
2 Min Read

ನವದೆಹಲಿ: ಎಐಸಿಸಿ ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿರಾಗ್ ಪಟ್ನಾಯಕ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ರಮ್ಯಾ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ಆಂತರಿಕ ತನಿಖೆಗೆ ಸಮಿತಿ ರಚಿಸಲಾಗಿದೆ. ಇದು ತನಿಖೆ ಹಂತದಲ್ಲಿರುವುದರಿಂದ ಗೌಪ್ಯತೆ ಕಾಪಾಡಲಾಗಿದೆ. ಈ ಬಗ್ಗೆ ಹೆಚ್ಚು ಪ್ರತಿಕ್ರಿಯಿಸಲಾರೆ ಎಂದಿದ್ದಾರೆ.

ಏನಿದು ಪ್ರಕರಣ?:
ಎಐಸಿಸಿ ಸೋಷಿಯಲ್ ಮಿಡಿಯಾ ಸದಸ್ಯ ಚಿರಾಗ್ ಪಟ್ನಾಯಕ್(39) ವಿರುದ್ಧ ಎಐಸಿಸಿ ಸೋಷಿಯಲ್ ಮಿಡಿಯಾದ ಮಾಜಿ ಸದಸ್ಯೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿ ನಾರ್ಥ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 354ಎ(ಲೈಂಗಿಕ ಕಿರುಕುಳ), 509(ಶಬ್ದ, ಸನ್ನೆಯ ಮೂಲಕ ಮಹಿಳೆಯರಿಗೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳೆಯ ದೂರಿನ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಚಿರಾಗ್ ಬಂಧನಕ್ಕೆ ಬಲೆ ಬೀಸಿದ್ದು, ನಾರ್ತ್ ಅವೆನ್ಯೂ ಪ್ರದೇಶದಲ್ಲಿ ಬಂಧಿಸಿದ್ದಾರೆ. ಆದ್ರೆ ಬಂಧನವಾದ 1 ಗಂಟೆಯೊಳಗೆ ಜಾಮೀನು ಸಿಕ್ಕಿದೆ.

ರಮ್ಯಾಗೆ ದೂರು ನೀಡಿದ್ದ ಸಂತ್ರಸ್ತೆ:
ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಎಐಸಿಸಿ ಸೋಷಿಯಲ್ ಮಿಡಿಯಾದ ಮಾಜಿ ಸದಸ್ಯೆ, ತಮಗಾಗುತ್ತಿರುವ ನೋವಿನ ಬಗ್ಗೆ ಎಐಸಿಸಿ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ರಮ್ಯಾ ಅವರಿಗೂ ಕೂಡ ದೂರು ನೀಡಿದ್ದರು. ಆದ್ರೆ ರಮ್ಯಾ ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳಲಿಲ್ಲ ಎಂದು ಅವರು ದೂರಿದ್ದರು. ಬಳಿಕ ಪ್ರಕರಣದ ಬಗ್ಗೆ ರಮ್ಯಾ ಪ್ರತಿಕ್ರಿಯಿಸಿ, ಮೊದಲು ಈ ವಿಷಯ ನನ್ನ ಗಮನಕ್ಕೆ ಬಂದಿರಲಿಲ್ಲ. ಚಿರಾಗ್ ಅಂತಹ ವ್ಯಕ್ತಿಯಲ್ಲ. ಈ ವಿಷಯದ ಬಗ್ಗೆ ನಾನು ಪರಿಶೀಲನೆ ಮಾಡುತ್ತೇನೆ. ತಮ್ಮ ತಂಡದ ಬಗೆಗಿನ ಆರೋಪದ ಬಗ್ಗೆ ಗೊತ್ತಾಗಿದೆ. ಆದರೆ ಸಮಿತಿಗೆ ಮೌಖಿಕವಾಗಿ, ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ದೂರು ಬಂದಿಲ್ಲ. ಅಷ್ಟೇ ಅಲ್ಲದೇ ಜುಲೈ ಮೂರರಂದು ರಮ್ಯಾ ಅವರು ಚಿರಾಗ್ ಪಟ್ನಾಯಕ್ ಬಗ್ಗೆ ಮೆಚ್ಚುಗೆ ಸೂಚಿಸಿ ಟ್ವೀಟ್ ಮಾಡಿದ್ದರು.

ರಮ್ಯಾ ಕ್ರಮ ಕೈಗೊಳ್ಳದಿದ್ದರಿಂದ ಮನನೊಂದ ಮಾಜಿ ಸದಸ್ಯೆ ದೆಹಲಿ ಪೊಲೀಸರಿಗೆ ಜುಲೈ 3ರಂದು ದೂರು ನೀಡಿದ್ದರು. ದೂರಿನಲ್ಲಿ, ಚಿರಾಗ್ ಎಂಬಾತ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದು ತನ್ನನ್ನು ಅಶ್ಲೀಲ ಮುಟ್ಟುವುದು, ಅಶ್ಲೀಲ ಸನ್ನೆ ಮಾಡುವುದು ಸಹಿತ ಇನ್ನಿತರ ಅಸಭ್ಯ ಸನ್ನೇ ಮಾಡುವುದು ಸಹಿತ ಇನ್ನಿತರ ಅಸಭ್ಯ ವರ್ತನೆಗಳನ್ನು ಮಾಡುತ್ತಿದ್ದ ಎಂದು ಉಲ್ಲೇಖಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *