ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್ ನಿಯೋಗ

Public TV
3 Min Read

– ಸಚಿವ ಅಜಯ್ ಮಿಶ್ರಾ ಅಮಾನತು, ನ್ಯಾಯಾಂಗ ತನಿಖೆಗೆ ಒತ್ತಾಯ

ನವದೆಹಲಿ: ಲಿಖೀಂಪುರ್ ಖೇರಿ ಹಿಂಸಚಾರ ಪ್ರಕರಣವನ್ನು ರಾಜಕೀಯವಾಗಿ ಜೀವಂತವಾಗಿಡಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್, ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದೆ. ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿದ ನಿಯೋಗ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾ ಮಾಡಿ, ನ್ಯಾಯಾಂಗ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.

ಬೆಳಗ್ಗೆ 11:30 ಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ನಿಯೋಗ ರಾಷ್ಟ್ರಪತಿಗಳನ್ನು ಭೇಟಿ ಮಾಡಿತು. ನಿಯೋಗದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಕೆ ಆಂಟನಿ, ಗುಲಾಂ ನಬಿ ಆಜಾದ್ ಉಪಸ್ಥಿತರಿದ್ದರು. ಇದನ್ನೂ ಓದಿ: ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ

ರಾಷ್ಟ್ರಪತಿಗಳ ಜೊತೆಗೆ ಚರ್ಚೆ ವೇಳೆ ಪ್ರಿಯಾಂಕಾ ಗಾಂಧಿ ರೈತರ ಹತ್ಯೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದೊಂದು ಕ್ಷಮಿಸಲಾಗದ ಕರುಣೆ ಇಲ್ಲದ ಕೊಲೆ ಎಂದು ಅವರು ವ್ಯಾಖ್ಯಾನಿಸಿದ್ದಾರೆ. ಇದೊಂದು ಉದ್ದೇಶ ಪೂರ್ವಕ ಘಟನೆಯಾಗಿದ್ದು ಸರ್ಕಾರ ನಡೆಗಳು ನಂಬಿಕೆಯನ್ನು ಕುಸಿಯುವಂತೆ ಮಾಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

ಕಾಂಗ್ರೆಸ್ ನಿಯೋಗದ ಪತ್ರದಲ್ಲಿ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆಯೂ ಪ್ರಸ್ತಾಪಿಸಲಾಗಿದ್ದು, ಮೋದಿ ಸರ್ಕಾರ ರೈತರ ಜೊತೆಗೆ ಅರ್ಥಪೂರ್ಣ ಮಾತುಕತೆ ನಡೆಸುತ್ತಿಲ್ಲ ಎಂದು ಆರೋಪಿಸಿದೆ. ಅಲ್ಲದೇ ಬಿಜೆಪಿ ನಾಯಕರು ಬಹಿರಂಗ ಬೆದರಿಕೆ ಹಾಕುತ್ತಿರುವುದು ಬೆಳಕಿಗೆ ಬಂದಿದೆ ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

ಅಕ್ಟೋಬರ್ 3 ರಂದು ಕೂಡಾ ಇದೇ ರೀತಿಯಾಗಿದ್ದು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು ರೈತರ ಮೇಲೆ ಕಾರು ಹರಿಸಲಾಗಿದೆ. ಇದರಿಂದ ಸ್ಥಳದಲ್ಲಿ ನಾಲ್ವರು ರೈತರು ಮತ್ತು ಓರ್ವ ಪತ್ರಕರ್ತ ಮೃತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದ್ದು ಎಲ್ಲ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಪ್ರತ್ಯೇಕ ದರ್ಶಿಗಳು ಹೇಳುವ ಪ್ರಕಾರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಈ ವೇಳೆ ವಾಹನದಲ್ಲಿದ್ದರು ಎಂದು ಧೃಢಪಡಿಸಲಾಗಿದೆ. ಇದನ್ನೂ ಓದಿ:  ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ

ಉತ್ತರ ಪ್ಮತ್ತು ಪೊಲೀಸರು ತನಿಖೆ ನಡೆಸಲು ಹಿಂದೇಟು ಹಾಕುತ್ತಿದ್ದುಹಾಕುತ್ತಿದ್ದು ಕೇಂದ್ರ ಸಚಿವನ ಮಗನ ವಿರುದ್ಧ ನ್ಯಾಯಯುತ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ, ನ್ಯಾಯಂಗ ತನಿಖೆ ಮಾಡುವಂತೆ ಕಾಂಗ್ರೆಸ್ ನಿಯೋಗ ಒತ್ತಾಯಿಸಿದೆ. ಇದನ್ನೂ ಓದಿ: ಭ್ರಷ್ಟಾಚಾರ ಮುಕ್ತವಾಗಲಿ ಅನ್ನೋ ಕಾಳಜಿ ಇದ್ರೆ ಉಗ್ರಪ್ಪ ದೂರು ನೀಡಲಿ: ಆರಗ ಜ್ಞಾನೇಂದ್ರ

Share This Article
Leave a Comment

Leave a Reply

Your email address will not be published. Required fields are marked *