ಭಾರತ್‌ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ʻಕೈʼ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆ

Public TV
1 Min Read

ಚಂಡೀಗಢ: ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರೊಂದಿಗೆ ʻಭಾರತ್‌ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತೆ (Congress Worker) ಹರಿಯಾಣದ ರೋಹ್ಟಕ್‌ ಜಿಲ್ಲೆಯ ಬಸ್‌ ನಿಲ್ದಾಣದ ಬಳಿ ಶವವಾಗಿ ಪತ್ತೆಯಾಗಿದ್ದಾರೆ.

ಬಸ್‌ ನಿಲ್ದಾಣದ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್‌ (22) (Himani Narwal) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್‌ ಆಗ್ರಹಿಸಿದೆ. ಇದನ್ನೂ ಓದಿ: ರಾಜಕೀಯ ಚದುರಂಗದಾಟಕ್ಕೆ ಮೂಡಿಗೆರೆ ಬಿಜೆಪಿ ಬಲಿ, ಬಹುಮತವಿದ್ರೂ ಕಾಂಗ್ರೆಸ್‌ಗೆ ಅಧಿಕಾರ!

ಸಂಪ್ಲಾ ಬಸ್‌ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್‌ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹ್ಟಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದೆ.

ಹಿಮಾನಿ ನರ್ವಾಲ್‌ ಅವರು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕ ಬಿಬಿ ಬಾತ್ರಾ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಇಂದು ಭಾರತ Vs ಕಿವೀಸ್‌ ಹೈವೋಲ್ಟೇಜ್‌ ಕದನ – ಸ್ಪಿನ್ನರ್‌ಗಳ ಚಕ್ರವ್ಯೂಹ ಭೇದಿಸುವುದೇ ಟೀಂ ಇಂಡಿಯಾ?

ಸದ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು, ಎಸ್‌ಐಟಿ ತನಿಖೆಗೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನೀವೆಲ್ಲ ಬಣ್ಣ ಹಾಕೊಂಡು ಸಿನಿಮಾ ಮಾಡ್ತೀರಾ, ನಾವು ಬಣ್ಣ ಹಾಕದೇ ಮಾಡ್ತೀವಿ – ಡಿಕೆಶಿ

Share This Article