22 ಕೋಟಿ ಮುಸ್ಲಿಮರಲ್ಲಿ 1-2 ಕೋಟಿ ಜನ ಸತ್ತರೆ ಯಾವ್ದೇ ಸಮಸ್ಯೆ ಆಗಲ್ಲ: ಕಾಂಗ್ರೆಸ್ ನಾಯಕನ ವಿವಾದಿತ ಹೇಳಿಕೆ

By
1 Min Read

ನವದೆಹಲಿ: ದೇಶದಲ್ಲಿರುವ 22 ಕೋಟಿ ಮುಸ್ಲಿಮರಲ್ಲಿ (Muslims) ಒಂದು ಅಥವಾ ಎರಡು ಕೋಟಿ ಜನರು ಸತ್ತರೆ ಯಾವುದೇ ಸಮಸ್ಯೆಯಾಗುವುದಿಲ್ಲ. ಮುಸ್ಲಿಮರು ಭಯದ ನೆರಳಿನಲ್ಲಿ ಬದುಕುತ್ತಿದ್ದು, ಈ ಸಮುದಾಯವನ್ನ ಕಳೆದ 10 ವರ್ಷಗಳಿಂದ ಬೆದರಿಸಲಾಗುತ್ತಿದೆ ಎಂದು ಕಾಂಗ್ರೆಸ್‌ನ (Congress) ಹಿರಿಯ ನಾಯಕ ಅಜೀಜ್‌ ಖುರೇಷಿ (Aziz Qureshi) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯ (Muslims Community) ತಮಗೆ ಅನ್ಯಾಯವಾದರೆ ಸಿಡಿದೇಳದೇ ಬೇರೆ ವಿಧಿಯಿಲ್ಲ. ಇತ್ತೀಚಿಗೆ ಕಾಂಗ್ರೆಸ್‌ನಲ್ಲಿ ಧರ್ಮದ ಬಗ್ಗೆ ಹೆಚ್ಚು ಒಲವು ಕಾಣುತ್ತಿದೆ. ಈ ಹೇಳಿಕೆಯ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ. ನನ್ನನ್ನು ಪಕ್ಷದಿಂದ ಬೇಕಾದರೆ ತೆಗೆದುಹಾಕಲಿ. ನನ್ನನ್ನು ಪಕ್ಷದಿಂದ ತೆಗೆದುಹಾಕಿದರೂ ನನಗೆ ಯಾವುದೇ ಭಯವಿಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಏಮ್ಸ್ ನಿರ್ಮಾಣಕ್ಕೆ ಒತ್ತಡ – ಕೇಂದ್ರ ಆರೋಗ್ಯ ಸಚಿವರ ಭೇಟಿಯಾದ ಹೈ.ಕ ನಾಯಕರ ನಿಯೋಗ

ಇಂದು ಕಾಂಗ್ರೆಸ್ಸಿಗರು ಜೈ ಗಂಗಾ ಮಾಯಿ, ಜೈ ನರ್ಮದಾ ಮಾಯಿ ಎಂಬ ಘೋಷಣೆಗಳನ್ನ ಕೂಗಿ ಧಾರ್ಮಿಕ ಮೆರವಣಿಗೆಗಳನ್ನು ನಡೆಸುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ನೆಹರೂ ಅವರ ಜಾತ್ಯತೀತ ಪರಿಕಲ್ಪನೆಯನ್ನ ನಾಶ ಮಾಡಲಾಗುತ್ತಿದೆ. ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲ ರಾಜಕೀಯ ಪಕ್ಷಗಳು ಮುಸ್ಲಿಂ ಸಮುದಾಯವು ತಮ್ಮ ಗುಲಾಮರಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ವಿಶ್ವದಲ್ಲೇ ಮೊದಲ ಬಾರಿಗೆ ಮೊಬೈಲ್ ಪ್ರೀಪೇಯ್ಡ್ ಪ್ಲ್ಯಾನ್‌ ಜೊತೆಗೆ ನೆಟ್‌ಫ್ಲಿಕ್ಸ್‌ ಸಬ್‌ಸ್ಕ್ರಿಪ್ಷನ್ ಪರಿಚಯಿಸುತ್ತಿದೆ Reliance Jio

ದೇಶದ ಪ್ರಧಾನಿ ಹಾಗೂ ಗೃಹ ಸಚಿವರು ತಮ್ಮ ಭಾಷಣಗಳ ಮೂಲಕ ಮುಸ್ಲಿಂ ಸಮುದಾಯವನ್ನ ಬೆದರಿಸುತ್ತಿದ್ದಾರೆ. ಸಮುದಾಯವು ಇಂದು ಭಯದ ನೆರಳಿನಲ್ಲಿ ಬದುಕುವ ಸ್ಥಿತಿ ಎದುರಾಗಿದೆ. ಬುಲ್ಡೋಜರ್‌ಗಳು ಮತ್ತು ಎನ್‌ಕೌಂಟರ್‌ಗಳು ಮುಸ್ಲಿಮರ ಮೇಲೆ ಮಾತ್ರ ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಖುರೇಷಿ ವಾಗ್ದಾಳಿ ನಡೆಸಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್