ಗಣೇಶ ವಿಸರ್ಜನೆ ಭದ್ರತೆಗೆ ತೆರಳಿದ್ದ ಪೇದೆ ಹೃದಯಾಘಾತಕ್ಕೆ ಬಲಿ

By
1 Min Read

ಕಲಬುರಗಿ: ಗಣೇಶ ವಿಸರ್ಜನಾ ಮೆರವಣಿಗೆಗೆ (Ganesh Procession) ಭದ್ರತೆಗಾಗಿ ತೆರಳಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವುದು ಸೇಡಂನ ಮಳಖೇಡದಲ್ಲಿ ನಡೆದಿದೆ.

ಮೃತರನ್ನು ಮಳಖೇಡ ಪೊಲೀಸ್ ಠಾಣೆಯ ಮುಖ್ಯಪೇದೆ ಮನೋಹರ್ ಪವಾರ್ (46) ಎಂದು ಗುರುತಿಸಲಾಗಿದೆ. ಅವರಿಗೆ ಕರ್ತವ್ಯದ ವೇಳೆಯೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಂಬುಲೇನ್ಸ್‍ನಲ್ಲಿ ಕಲಬುರಗಿ ಆಸ್ಪತ್ರೆಗೆ ಕರೆದೊಯ್ಯುವ ಯತ್ನ ಮಾಡಲಾಯಿತು. ಆದರೆ ಮಾರ್ಗ ಮಧ್ಯೆಯೆ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮಂಡ್ಯ | ಗಣೇಶ ಮೆರವಣಿಗೆ ವೇಳೆ ಡಿಜೆ ಸೌಂಡ್‌ಗೆ ಕುಣಿಯುತ್ತಿದ್ದ ವ್ಯಕಿ ಹೃದಯಾಘಾತಕ್ಕೆ ಬಲಿ

ಮಳಖೇಡ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಸುತ್ತಿದ್ದ ಮನೋಹರ್ ಸಾವಿಗೆ ಸಹೋದ್ಯೋಗಿಗಳು ಹಾಗೂ ಆತ್ಮೀಯರು ಕಂಬನಿ ಮಿಡಿದಿದ್ದಾರೆ. ಹಿರಿಯ ಅಧಿಕಾರಿಗಳು ಹಾಗೂ ಠಾಣೆಯ ಸಿಬ್ಬಂದಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಯಾದಗಿರಿ | ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತಕ್ಕೆ ಬಲಿ

Share This Article