ಹೆತ್ತಪ್ಪನಿಂದಲೇ ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ನಿರಂತರ ಅತ್ಯಾಚಾರ

By
1 Min Read

ಲಕ್ನೋ: ಸತತ 4 ವರ್ಷಗಳಿಂದ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ (Minor Daughters) ಮೇಲೆ ಅತ್ಯಾಚಾರ (Rape) ನಡೆಸುತ್ತಿದ್ದ 40 ವರ್ಷದ ಪಾಪಿ ತಂದೆಯನ್ನು (Father) ಪೊಲೀಸರು ಬಂಧಿಸಿರುವ ಘಟನೆ ಉತ್ತರಪ್ರದೇಶದಲ್ಲಿ (Uttar Pradesh) ನಡೆದಿದೆ.

ಆರೋಪಿ ತಂದೆ 15 ಮತ್ತು 17 ವರ್ಷದ ತನ್ನ ಮಕ್ಕಳ ಮೇಲೆ ಕಳೆದ ನಾಲ್ಕು ವರ್ಷಗಳಿಂದ ನಿರಂತರ ಅತ್ಯಾಚಾರ ನಡೆಸಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ (Threat) ಹಾಕಿದ್ದಾನೆ. ಮಕ್ಕಳಿಬ್ಬರು ಅರೆಮನಸ್ಸಿನಿಂದ ತರಗತಿಗಳಿಗೆ ಹಾಜರಾಗುತ್ತಿರುವುದನ್ನು ಗಮನಿಸಿದ ಶಿಕ್ಷಕರೊಬ್ಬರು 17 ವರ್ಷದ ಬಾಲಕಿಯನ್ನು ವಿಚಾರಿಸಿದ್ದಾರೆ. ಇದನ್ನೂ ಓದಿ: ಟ್ರ್ಯಾಕ್ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ

ಈ ವೇಳೆ ಬಾಲಕಿ ತಮಗಾಗುತ್ತಿರುವ ಸಮಸ್ಯೆಯನ್ನು ಶಿಕ್ಷಕರ ಬಳಿ ಹೇಳಿಕೊಂಡಿದ್ದಾಳೆ. ವಿಷಯ ಅರಿತ ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಷ್ಟು ಮಾತ್ರವಲ್ಲದೇ ತರಗತಿ ಮುಗಿದ ಬಳಿಕ ಮಕ್ಕಳು ತಾಯಿ ಕೆಲಸದಿಂದ ಬರುವವರೆಗೆ ಅಲ್ಲೇ ಇದ್ದ ಪಾರ್ಕ್ವೊಂದರಲ್ಲಿ ಕುಳಿತುಕೊಳ್ಳುತ್ತಿದ್ದರು. ತಮ್ಮ ತಂದೆ ಕೆಲಸವಿಲ್ಲದೇ ಮನೆಯಲ್ಲೇ ಇರುತ್ತಿದ್ದು, ತಾಯಿ ಕೆಲಸಕ್ಕೆ ಹೋಗಿ ತಮ್ಮನ್ನು ಸಾಕುತ್ತಿದ್ದರು ಎಂದು ಮಕ್ಕಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ಪಾಪಿ ತಂದೆಯನ್ನು ಬಂಧಿಸಲಾಗಿದೆ ಎಂದು ಮಸೂರಿ ಎಸಿಪಿ ನರೇಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಮೂವರು ಸಹೋದರಿಯರ ಮೃತದೇಹ ಟ್ರಂಕ್‌ನಲ್ಲಿ ಪತ್ತೆ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್