400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್ – ಪೊಲೀಸರಿಗೆ ತಾನೇ ಶರಣಾದ ಪ್ರಮುಖ ಆರೋಪಿ

1 Min Read

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯ (Karnataka Maharashtra border) ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣಕ್ಕೆ (Robbery Case) ಬಿಗ್‌ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾವಳೆ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

Belagavi Police 2

ನಂತರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನ ಎಸ್‌ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ಬೆಳಕಿಗೆ – 400 ಕೋಟಿ ದರೋಡೆ

Belagavi 1

ಮತ್ತೊಂದ್ಕಡೆ, ಇದೇ ಚೋರ್ಲಾ ಘಾಟ್ ಮಾರ್ಗದಲ್ಲೇ ತೆಲುಗಿನ `ಪುಷ್ಪ’ ಸಿನಿಮಾವನ್ನ ನೆನಪಿಸುವಂತೆ ಕಸದ ಮಧ್ಯೆ 25 ಲಕ್ಷ ಮೌಲ್ಯದ 800 ಮದ್ಯದ ಬಾಕ್ಸ್‌ಗಳನ್ನ ಸಾಗಿಸುವಾಗ ಬೆಳಗಾವಿಯ ಮಾಳಮಾರುತಿ ಪೊಲೀಸರು ಸೀಜ್ ಮಾಡಿದ್ದಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಈ ಮದ್ಯವನ್ನ ಸಾಗಿಸಲಾಗ್ತಿತ್ತು. ಇದನ್ನೂ ಓದಿ: ನಾಪತ್ತೆಯಾದ 400 ಕೋಟಿ ಹಣ ಗುಜರಾತಿನ ಪ್ರಭಾವಿ ರಾಜಕಾರಣಿಯದ್ದು?

Share This Article