Bigg Boss Kannada: ಬಿಗ್ ಬಾಸ್ ಮನೆಗೆ ಆಗಲೇ ಕಾಲಿಟ್ಟ ಸ್ಪರ್ಧೆಗಳು? ಚಿತ್ರೀಕರಣದಲ್ಲಿ ಸುದೀಪ್

By
2 Min Read

ಅಸಲಿಯಾಗಿ ನಾಳೆಯಿಂದ ಬಿಗ್ ಬಾಸ್ ಕನ್ನಡ ಸೀಸನ್ 9 ಶುರುವಾದರೂ, ಇಂದೇ ಆ ಭಾಗದ ಚಿತ್ರೀಕರಣ ಶುರುವಾಗಿದೆ ಅನ್ನುವ ವಿಷಯ ಹರಿದಾಡುತ್ತಿದೆ. ಇಂದು ನಡೆದಿರುವ ಚಿತ್ರೀಕರಣದಲ್ಲಿ ಸುದೀಪ್ ಭಾಗಿಯಾಗಿದ್ದಾರೆ. ಈಗಾಗಲೇ 6ಕ್ಕೂ ಹೆಚ್ಚು  ಸ್ಪರ್ಧಿಗಳು ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ನಡೆದ ಚಿತ್ರೀಕರಣದಲ್ಲಿ ಕಿರುತೆರೆ ನಟಿ ನಮ್ರತಾ ಗೌಡ, ನಟ ವಿನಯ್ ಗೌಡ, ಟ್ರಾನ್ಸ್ ಝಂಡರ್ ನೀತು, ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್, ಉರಗ ತಜ್ಞ ಸ್ನೇಕ್ ಶ್ಯಾಮ್ ದೊಡ್ಮನೆ ಪ್ರವೇಶ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಾಳೆ ಸಂಜೆಯಿಂದ ಬಿಗ್ ಬಾಸ್ ಆಟ ಶುರುವಾಗಲಿದೆ. ಅದಕ್ಕೂ ಮುನ್ನ ದೊಡ್ಮನೆಗೆ ಎಂಟ್ರಿ ಕೊಡುವವರ ಲಿಸ್ಟ್ ಹೊರ ಬೀಳುತ್ತಲೇ ಇದೆ. ಅಧಿಕೃತವಾದ ಹಾದಿ ಅದಾಗದಿದ್ದರೂ, ನಾನಾ ಮೂಲಗಳಿಂದ ಹೆಕ್ಕಿ ಹೆಸರುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಲೇ ಇದ್ದಾರೆ. ಈವರೆಗೂ ಒಂದಷ್ಟು ಹೆಸರುಗಳು ಕೇಳಿ ಬಂದಿದ್ದವು. ಆದರೆ, ಅವರಾರು ಬಿಗ್ ಬಾಸ್ ಮನೆಗೆ ಹೋಗುತ್ತಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಈಗ ಸಿಕ್ಕಿರುವ ಹಾದಿಯಲ್ಲಿ ಬಹುತೇಕರು ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮೈಸೂರಿನ ಹೆಸರಾಂತ ಉರಗತಜ್ಞ ಸ್ನೇಕ್ ಶ್ಯಾಮ್ (Snake Shyam) ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರಂತೆ. 80 ಸಾವಿರಕ್ಕೂ ಅಧಿಕ ಹಾವುಗಳನ್ನು ಸಂರಕ್ಷಣೆ ಮಾಡಿರುವ ಸ್ನೇಕ್ ಶ್ಯಾಮ್, ಆ ಭಾಗದಲ್ಲಿ ಪ್ರಸಿದ್ಧರು. ಅದ್ಭುತವಾಗಿ ಮಾತನಾಡುತ್ತಾರೆ. ಅಲ್ಲದೇ, ರಾಜಕಾರಣದಲ್ಲೂ ಈ ಹಿಂದೆ ಸಕ್ರಿಯರಾಗಿದ್ದವರು.

ನಾಗಿಣಿ ಧಾರಾವಾಹಿಯ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ನಮ್ರತಾ ಗೌಡ (Namrata Gowda) ಕೂಡ ಈ ಬಾರಿ ಬಿಗ್ ಬಾಸ್ ಮನೆಯನ್ನು ಪ್ರವೇಶ ಮಾಡಲಿದ್ದಾರಂತೆ. ಚಿಕ್ಕ ವಯಸ್ಸಿನಿಂದಲೇ ಧಾರಾವಾಹಿ ಪ್ರಪಂಚಕ್ಕೆ ಕಾಲಿಟ್ಟ ನಮ್ರತಾ ಸಿಕ್ಕಾಪಟ್ಟೆ ಫೇಮಸ್ ಆಗಿದ್ದು ನಾಗಿಣಿ 2 ಧಾರಾವಾಹಿಯ ಮೂಲಕ.

ರಾಪರ್ ಆಗಿರುವಂತಹ ಇಶಾನಿ  (Ishani) ಕೂಡ ಬಿಗ್ ಬಾಸ್ ಮನೆಯತ್ತ ಹೆಜ್ಜೆ ಹಾಕಿದ್ದಾರೆ. ನಿನ್ನೆಯಿಂದಲೇ ನಡೆದ ವಾಹಿನಿಯ ಹಲವಾರು ಕಾರ್ಯಕ್ರಮಗಳಲ್ಲಿ ಇಶಾನಿ ಭಾಗಿಯಾಗಿದ್ದಾರೆ. ಹಾಗಾಗಿ ಇಶಾನಿ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರುವುದು ಪಕ್ಕಾ ಎಂದು ಹೇಳಲಾಗುತ್ತಿದೆ.

ಇವರ ಜೊತೆಗೆ ಮಜಾ ಭಾರತ ಮತ್ತು ಇತರ ಕಾಮಿಡಿ ಶೋಗಳಲ್ಲಿ ಕಾಣಿಸಿಕೊಂಡಿರುವ ಚಂದ್ರಪ್ರಭ ಕೂಡ ಬಿಗ್ ಬಾಸ್ ಮನೆಯಲ್ಲಿ ಇರುವುದು ಖಚಿತ ಎಂದು ಹೇಳಲಾಗುತ್ತಿದೆ. ಇವರ ಜೊತೆಗೆ ಸುಕ್ರತಾ ನಾಗ್, ಕೋಮಲ್ ಕೂಡ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎನ್ನುವುದು ಸದ್ಯಕ್ಕೆ ಸಿಕ್ಕಿರುವ ವರ್ತಮಾನ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್