ಕೊಡಗಿನಲ್ಲಿ ಮುಂದುವರಿದ ಭಾರೀ ಮಳೆ – ಶಾಲೆಗಳಿಗೆ ಮಂಗಳವಾರವೂ ರಜೆ ಘೋಷಣೆ

Public TV
1 Min Read

ಮಡಿಕೇರಿ: ಕೊಡಗಿನಾದ್ಯಂತ (Kodagu) ಭಾರೀ ಗಾಳಿ ಮಳೆ (Rain) ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಮಂಗಳವಾರವೂ ರಜೆ (Holiday) ಘೋಷಣೆ ಮಾಡಲಾಗಿದೆ.

ಪರೀಕ್ಷೆ ಹಿನ್ನೆಲೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಜಿಲ್ಲೆಯ ಅಂಗನವಾಡಿ, ಶಾಲೆ, ಹಾಗೂ ಪಿಯು ಕಾಲೇಜಿಗೆ ಮಂಗಳವಾರವೂ ರಜೆ ಘೋಷಿಸಿ ಕೊಡಗು ಡಿಸಿ ವೆಂಕಟ್ ರಾಜ್ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಭಾರೀ ಅವಾಂತರಗಳು ಸೃಷ್ಟಿಯಾಗಿದೆ. ಕೊಡಗಿನ ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಾವೇರಿ ಹಾಗೂ ಉಪನದಿಗಳು ಮೈದುಂಬಿ ಹರಿಯುತ್ತಿವೆ. ಭಾಗಮಂಡಲದ ತ್ರಿವೇಣಿ ಸಂಗಮದ ನೀರು ಭಂಗಢೇಶ್ವರ ದೇವಾಲಯ ಆವರಣದವರೆಗೂ ಹರಿದಿದೆ. ಇದನ್ನೂ ಓದಿ: KRS ಡ್ಯಾಂ 3 ಅಡಿ ಭರ್ತಿ – 29,552 ಕ್ಯೂಸೆಕ್ ನೀರು ಒಳಹರಿವು

ಭಾಗಮಂಡಲ-ನಾಪೋಕ್ಲು ರಸ್ತೆ ಜಲಾವೃತವಾಗಿದ್ದು, 4 ಅಡಿಯಷ್ಟು ನೀರು ತುಂಬಿಕೊಂಡಿದೆ. ಭಾರೀ ಗಾತ್ರದ ವಾಹನಗಳಷ್ಟೇ ಪ್ರದೇಶಗಳಲ್ಲಿ ಸಂಚಾರಕ್ಕೆ ಸಾಧ್ಯವಾಗುತ್ತಿದ್ದು, ಸಣ್ಣ ಪುಟ್ಟ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮುಜಾಗ್ರತಾ ಕ್ರಮವಾಗಿ ಒಂದು ತಿಂಗಳಿಂದ ಭಾಗಮಂಡಲದಲ್ಲಿ ಗೃಹ ರಕ್ಷಕ ದಳ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ಕಳೆದ ರಾತ್ರಿಯಿಂದ ಮಳೆ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಇಳಿಕೆಯಾಗಿದೆ. ಜಲಾಶಯಕ್ಕೆ ಒಳಹರಿವು 16,120 ಕ್ಯೂಸೆಕ್ ನೀರು ಇದ್ದು, ಕಾವೇರಿ ನದಿಗೆ 18,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಕಳೆದ ರಾತ್ರಿ ಡ್ಯಾಂ ಅಧಿಕಾರಿಗಳು 36,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದಾರೆ. ಸದ್ಯದ ಮಟ್ಟಿಗೆ ಮಳೆ ಆರ್ಭಟ ಕಡಿಮೆಯಾಗಿದ್ದು, ಕೊಡಗು ಜಿಲ್ಲೆ ಶಾಂತವಾಗಿದೆ. ಇದನ್ನೂ ಓದಿ: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವು- ಮೊಬೈಲ್‍ನಲ್ಲಿ ಕೊನೇ ಕ್ಷಣ ಸೆರೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್