ಮುಂದುವರಿದ ಮಳೆ ಆರ್ಭಟ – ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಅಲರ್ಟ್

Public TV
1 Min Read

– ಕೊಡಗು, ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ (Karnataka Rain) ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಿ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈಗಾಗಲೇ ಮಳೆ ಆರ್ಭಟ ಶುರುವಾಗಿದ್ದು, ಕುಂಭದ್ರೋಣ ಮಳೆಗೆ ಕರಾವಳಿ ಜನ ಹೈರಾಣಾಗಿದ್ದಾರೆ. ಹವಾಮಾನ ಇಲಾಖೆ ಕರಾವಳಿ (Karavali) ಹಾಗೂ ಮಲೆನಾಡು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಕೊಟ್ಟಿದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

ದಕ್ಷಿಣ ಕನ್ನಡ (Dakshina Kannada), ಉಡುಪಿ, ಉತ್ತರ ಕನ್ನಡ, ಕೊಡಗು ಸೇರಿದಂತೆ 8 ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆ ಆರ್ಭಟಿಸುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 17 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದ 5 ತಾಲೂಕು, ಉಡುಪಿ ಜಿಲ್ಲೆಯ ಶಾಲೆಗಳಿಗೆ ಸೋಮವಾರ ರಜೆ

ಇದರೊಂದಿಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಿದ್ದು, ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಉತ್ತರಾಖಂಡ್‌ ಹೆಲಿಕಾಪ್ಟರ್‌ ಪತನ – 15 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಪೈಲಟ್‌ಗಿತ್ತು ಅಪಾರ ಅನುಭವ

ಇಂದು ಎಲ್ಲೆಲ್ಲಿ ಶಾಲೆ -ಕಾಲೇಜು ರಜೆ?
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ಶಾಲೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಳೆ ಜೋರಾದ ಹಿನ್ನೆಲೆ ಜೂ.16 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆ ಹಿನ್ನೆಲೆ ರಜೆ ಘೋಷಿಸಲಾಗಿದೆ. ಅಷ್ಟೇ ಅಲ್ಲದೇ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಯೂ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ನಿಖಿಲ್ ಪಟ್ಟಾಭಿಷೇಕಕ್ಕೂ ಮುನ್ನ ರಾಜ್ಯ ಪ್ರವಾಸದ ಪರೀಕ್ಷೆ – ನಾಳೆಯಿಂದ ಮೊದಲ ಹಂತದ ಟೂರ್

Share This Article