ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ – 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
1 Min Read

– ಬೆಂಗಳೂರಿಗೆ ಇಂದು ಆರೆಂಜ್ ಅಲರ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ (IMD) ಬೆಂಗಳೂರಿಗೆ (Bengaluru) ಇಂದು (ಬುಧವಾರ) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಬುಧವಾರ, ಗುರುವಾರ ಎರಡು ದಿನ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ಕಾರಣಕ್ಕೆ ಇಂದು ನಗರದ ಪ್ರಾಥಮಿಕ, ಫ್ರೌಡಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಇತ್ತ ಮಳೆ ಹೆಚ್ಚಾಗಿದ್ದರ ಎಫೆಕ್ಟ್ ಐಟಿ ವಲಯಗಳಿಗೂ ತಟ್ಟಿದ್ದು, ಅಲರ್ಟ್ ಘೋಷಣೆ ಹಿನ್ನೆಲೆ ಹಲವು ಕಂಪನಿಗಳು  ತಮ್ಮ ಸಿಬ್ಬಂದಿಗಳ ಹಿತ ದೃಷ್ಟಿಯಿಂದ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿವೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಡ್ರಗ್ಸ್ ದಂಧೆ ಕಡಿವಾಣಕ್ಕೆ ಕಠಿಣ ಕಾನೂನು ಕ್ರಮ ಬೇಕಾಗಿದೆ: ಮಂಜುನಾಥ್ ಭಂಡಾರಿ

ಇತ್ತ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೊಡಗು ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಉಡುಪಿ| ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

Share This Article