ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ ಮುಂದುವರಿದ ನೀರು ಬಿಡುಗಡೆ; ಈಗ ನೀರು ಎಷ್ಟಿದೆ?

By
1 Min Read

ಮಂಡ್ಯ: ಕೆಆರ್‌ಎಸ್ (KRS) ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮುಂದವರಿಕೆಯಾಗಿದ್ದು, ಇಂದು (ಸೋಮವಾರ) 2 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರು ತಮಿಳುನಾಡಿಗೆ (Tamil Nadu) ಹೋಗುತ್ತಿದೆ.

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಬೇಕೆಂದು ನಿತರಂತರವಾಗಿ ಹೋರಾಟ ನಡೆಯುತ್ತಿದೆ. ಆದರೆ ಸರ್ಕಾರ ಹೋರಾಟಕ್ಕೆ ಸೊಪ್ಪು ಹಾಕದೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇಂದು ನಾಲೆ ಹಾಗೂ ತಮಿಳುನಾಡಿಗೆ ಸೇರಿ ಡ್ಯಾಂನಿಂದ 5,973 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಂ ಒಳಹರಿವಿನ ಪ್ರಮಾಣ 3503 ಕ್ಯೂಸೆಕ್‌ಗೆ ಕುಸಿತ ಕಂಡಿದ್ದು, 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 100.92 ಅಡಿ ಮಾತ್ರ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಮಳೆ ಕೊರತೆ – ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ

ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ- 124.80 ಅಡಿಗಳು
ಇಂದಿನ ಮಟ್ಟ- 100.92 ಅಡಿಗಳು
ಗರಿಷ್ಠ ಸಾಮರ್ಥ್ಯ- 49.452 ಟಿಎಂಸಿ
ಇಂದಿನ ಸಾಮರ್ಥ್ಯ- 23.539 ಟಿಎಂಸಿ
ಒಳಹರಿವು- 3503 ಕ್ಯೂಸೆಕ್
ಹೊರ ಹರಿವು- 5973 ಕ್ಯೂಸೆಕ್

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್