ಬೀದರ್: ಕಳೆದ ಕೆಲ ದಿನಗಳಿಂದ ಗಡಿಜಿಲ್ಲೆ ಬೀದರ್‌ನಲ್ಲಿ (Bidar) ಧಾರಾಕಾರ ಮಳೆಯಾಗುತ್ತಿದ್ದು, ನೂರಾರು ಎಕರೆ ಬೆಳೆ ನೀರುಪಾಲಾಗಿದೆ.
ಬೀದರ್ ತಾಲೂಕಿನ ಕೊಳ್ಳಾರ ಮತ್ತು ಅಣದೂರು ಗ್ರಾಮದ ಸುತ್ತಮುತ್ತ ನೂರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಉದ್ದು, ತೊಗರಿ, ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.ಇದನ್ನೂ ಓದಿ:ಬಿಹಾರ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ
ಜಮೀನಿನಲ್ಲಿ 3 ರಿಂದ 4 ಅಡಿ ನೀರು ನಿಂತಿದ್ದು, ಇಡೀ ಜಮೀನು ಅಕ್ಷರಶಃ ಕೆರೆಯಂತಾಗಿವೆ. ಪರಿಣಾಮ ನೀರಿನಲ್ಲಿ ಮುಳುಗಡೆಯಾದ ಬೆಳೆಗಳು ಕೊಳೆತು ಹೋಗಿವೆ. ಒಂದು ವಾರದ ಹಿಂದೆಯೇ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿತ್ತು. ಈವರೆಗೂ ಮಳೆ ಕಡಿಮೆಯಾಗದೇ ಜಿಲ್ಲೆಯ ಜನರು ಪರದಾಡುವಂತಾಗಿದೆ.
ಸಾಲ ಮಾಡಿ, ಸಾವಿರಾರು ರೂಪಾಯಿ ಹಣ ಖರ್ಚು ಮಾಡಿ ಬಿತ್ತನೆ ಮಾಡಿದ್ದ ಬೆಳೆ, ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಇದರಿಂದ ರೈತರು ಕಣ್ಣೀರು ಹಾಕುತ್ತಿದ್ದು, ಯಾವ ಶಾಸಕರು, ಅಧಿಕಾರಿಗಳು ನಮಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಇನ್ಶೂರೆನ್ಸ್ ಕಟ್ಟಿದ್ರು ಯಾವುದೇ ಪ್ರಯೋಜನವಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.ಇದನ್ನೂ ಓದಿ: ಶಾಲಾ ಕಟ್ಟಡ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ – ಆಸ್ಪತ್ರೆಗೆ ಮಧು ಬಂಗಾರಪ್ಪ ಭೇಟಿ