ಸೆ.21ರಂದು ಸುಪ್ರೀಂಗೆ ಕೆಆರ್‌ಎಸ್ ಚಿತ್ರಣ ಮನವರಿಕೆ ಮಾಡಿ – ಪ್ರತಿಭಟನಾಕಾರರ ಆಕ್ರೋಶ

By
1 Min Read

ಮಂಡ್ಯ: ಕೆಆರ್‌ಎಸ್ (KRS) ಡ್ಯಾಂನಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದನ್ನು ಮುಂದಿನ ವಿಚಾರಣೆ ಸೆ.21ರಂದು ಸುಪ್ರೀಂ ಕೋರ್ಟ್‍ಗೆ (Supreme Court) ಮನವರಿಕೆ ಮಾಡಿಕೊಡಬೇಕು. ಇಲ್ಲಿಯವರೆಗೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿಲ್ಲ ಎಂದು ರೈತ ಹಿತರಕ್ಷಣಾ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಳೆ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ರೈತ ಹಿತರಕ್ಷಣಾ ಸಮಿತಿ ಸದಸ್ಯರು, ರಾಜ್ಯ ಸರ್ಕಾರ ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್ ಆದೇಶ ಎಂದು ಮತ್ತೆ ನೀರು ಬಿಟ್ಟರೆ ಕುಡಿಯುವ ನೀರು ಸಿಗುವುದಿಲ್ಲ. ಆದ್ದರಿಂದ ನಮ್ಮಲ್ಲಿ ಆತಂಕ ಮುಂದುವರೆದಿದೆ. ಇದರಿಂದಾಗಿ ನೀರು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ರಾಜ್ಯ ಸರ್ಕಾರ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಹೈವೋಲ್ಟೇಜ್ ಸಭೆ

ಈ ವೇಳೆ ಕಾವೇರಿ ನೀರು ನಿಯಂತ್ರಣ ಸಮಿತಿ, ಕಾವೇರಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ತಡೆಯಿಂದ ಕೆಲ ಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು.

ಕೆಆರ್‍ಎಸ್ ಡ್ಯಾಂನ ನೀರು 20 ಟಿಎಂಸಿಗೆ ಕುಸಿತ ಕಂಡಿದೆ. 20 ಟಿಎಂಸಿ ನೀರಿನ ಪೈಕಿ ಬಳಕೆಗೆ ಕೇವಲ 15 ಟಿಎಂಸಿ ನೀರು ಮಾತ್ರ ಲಭ್ಯವಾಗುತ್ತದೆ. ಡ್ಯಾಂನಲ್ಲಿ ಇಂದು 97.52 ಅಡಿಯಷ್ಟು ಮಾತ್ರ ನೀರು ಇದ್ದು, ಡ್ಯಾಂನ ಒಳಹರಿವು 2,985 ಕ್ಯೂಸೆಕ್ ಆಗಿದೆ. ಹೊರ ಹರಿವು 4,742 ಕ್ಯೂಸೆಕ್ ಆಗಿದೆ. ಇದನ್ನೂ ಓದಿ: CWRC ಆದೇಶ ಪಾಲನೆ ಅಸಾಧ್ಯ, ತಮಿಳುನಾಡಿಗೆ ನೀರು ಬಿಡಲ್ಲ: ಕೇಂದ್ರಕ್ಕೆ ಸಿಎಂ ಪತ್ರ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್