SSLC ಪರೀಕ್ಷಾ ಕೇಂದ್ರದಲ್ಲಿ ನಕಲು – ಮುಖ್ಯೋಪಾಧ್ಯಾಯ ಸೇರಿ 15 ಸಿಬ್ಬಂದಿ ಅಮಾನತು

Public TV
1 Min Read

ಕಲಬುರಗಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ (SSLC Exam) ಕೇಂದ್ರದಲ್ಲಿ ಸಾಮೂಹಿಕ ನಕಲು ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾಯ ಸೇರಿದಂತೆ ಪರೀಕ್ಷಾ ಕೇಂದ್ರದ 15 ಸಿಬ್ಬಂದಿಯನ್ನು ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ್ ಬಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ದಿಢೀರನೆ ಭೇಟಿ ನೀಡಿದ್ದಾಗ ಸಾಮೂಹಿಕ ನಕಲು (Copy) ನಡೆಯುತ್ತಿರುವುದನ್ನು ಕಲಬುರಗಿ ಎಸ್‌ಪಿ ಇಶಾ ಪಂತ್ ಕಣ್ಣಾರೆ ಕಂಡಿದ್ದರು. ಇದನ್ನೂ ಓದಿ: Congress List: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ – ಯಾರಿಗೆ ಎಲ್ಲಿ ಟಿಕೆಟ್?

ಏಪ್ರಿಲ್ 3 ರಂದು ನಡೆದ ಪರೀಕ್ಷೆಯಲ್ಲಿ ಗೊಬ್ಬುರ್ ಬಿ ಗ್ರಾಮ, ಅತನೂರ್ ಗ್ರಾಮ ಸೇರಿದಂತೆ ವಿವಿಧೆಡೆ ಸಾಮೂಹಿಕ ನಕಲು ನಡೆದಿದೆ. ನಕಲು ಮಾಡಲು ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯ ಹಾಗೂ ಸಿಬ್ಬಂದಿ ಅವಕಾಶ ಮಾಡಿಕೊಟ್ಟಿದ್ದರು ಎಂದು ಆರೋಪಿಸಲಾಗಿದೆ.

ಮೈಕ್ರೋ ಜೆರಾಕ್ಸ್ ಮಾಡಿಕೊಂಡು ಪುಸ್ತಕ ಹಿಡಿದು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರು. ಈ ಕಾರಣಕ್ಕೆ ಮುಖ್ಯೋಪಾಧ್ಯಾಯ ಸೇರಿದಂತೆ 15 ಜನ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಒಟ್ಟು 22.79 ಕೋಟಿ ನಗದು, 1,52 ಕೋಟಿ ಮೌಲ್ಯದ ಲಿಕ್ಕರ್ ವಶ

Share This Article