ಕೊರೊನಾ ರೀ ಎಂಟ್ರಿ – ನಿತ್ಯ 150 ರಿಂದ 200 ಸ್ಯಾಂಪಲ್ ಟೆಸ್ಟಿಂಗ್‌ಗೆ ಟಾರ್ಗೆಟ್

By
1 Min Read

– ಸಾರಿ ಕೇಸ್‌ಗಳ ಕಡ್ಡಾಯ ಟೆಸ್ಟಿಂಗ್‌ಗೆ ಸೂಚನೆ

ಬೆಂಗಳೂರು: ಮಹಾಮಾರಿ ಕೊರೊನಾ (Corona) ಮತ್ತೆ ಎಂಟ್ರಿ ಕೊಟ್ಟ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ (Health Department) ಟೆಸ್ಟಿಂಗ್ ಟಾರ್ಗೆಟ್ ನೀಡಿದೆ. ನಿತ್ಯ 150 ರಿಂದ 200 ಸ್ಯಾಂಪಲ್ ಟೆಸ್ಟಿಂಗ್‌ಗೆ ಟಾರ್ಗೆಟ್ ನೀಡಲಾಗಿದೆ.

ಸಾರಿ (SARI) ಕೇಸ್‌ಗಳ ಕಡ್ಡಾಯ ಟೆಸ್ಟಿಂಗ್‌ಗೆ ಸೂಚನೆ ನೀಡಿದ್ದು, ಸರ್ಕಾರಿ ಪ್ರಯೋಗಾಲಯಕ್ಕೆ ಸ್ಯಾಂಪಲ್ ರವಾನಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ ಕೋವಿಡ್-19 ಟೆಸ್ಟಿಂಗ್‌ಗೆ ಅಗತ್ಯ ಟೆಸ್ಟಿಂಗ್ ಕಿಟ್‌ಗಳು ಲಭ್ಯವಿದ್ದು, ಸಾರಿ ಪ್ರಕರಣ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಳೆ-ಗಾಳಿಗೆ ನೆಲಕ್ಕೆ ಉದುರಿದ ದಾಳಿಂಬೆ ಹೂಗಳು – ಸಾಲ ಸೋಲ ಮಾಡಿ ಬಂಡವಾಳ ಹೂಡಿದ್ದ ರೈತ ಕಂಗಾಲು

ಯಾರಿಗೆ ಕೊರೊನಾ ಟೆಸ್ಟ್ ಕಡ್ಡಾಯ?
– ಎಲ್ಲಾ ಸಾರಿ (ಉಸಿರಾಟದ ತೊಂದರೆ) ಪ್ರಕರಣಗಳಿಗೆ ಕಡ್ಡಾಯ.
– ವಯೋವೃದ್ಧರಲ್ಲಿ ಕೊರೊನಾ ಗುಣಲಕ್ಷಣಗಳು ಇದ್ರೆ ಟೆಸ್ಟಿಂಗ್ ಕಡ್ಡಾಯ.
– ಗರ್ಭಿಣಿ ಸ್ತ್ರೀಯರಲ್ಲಿ ಗುಣಲಕ್ಷಣಗಳು ಕಂಡು ಬಂದರೆ ಟೆಸ್ಟಿಂಗ್ ಕಡ್ಡಾಯ.

ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ ವಿಆರ್‌ಡಿಎಲ್ ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, ಎನ್‌ಐವಿ ಕೇಂದ್ರ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಟೆಸ್ಟಿಂಗ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಒಂದು ತಿಂಗಳಿಗಾಗುವಷ್ಟು 5,000 ಆರ್‌ಟಿಪಿಸಿಆರ್ ಟೆಸ್ಟಿಂಗ್ ಕಿಟ್‌ಗಳನ್ನ ತೆಗೆದುಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ನೀನೇ ಬೇಕೆಂದು ಪ್ರೀತಿಸಿ ಮದುವೆ – 3 ತಿಂಗಳ ಗರ್ಭಿಣಿ ಮಾಡಿ ಪತಿ ಎಸ್ಕೇಪ್

Share This Article