ಪೊಲೀಸರ ಎಚ್ಚರಿಕೆಯನ್ನೇ ಧಿಕ್ಕರಿಸಿ ಬಿಜೆಪಿಯಿಂದ ಮಂಡ್ಯದಲ್ಲಿ ಬೃಹತ್ ರ‍್ಯಾಲಿ!

Public TV
2 Min Read

– ಜಿಲ್ಲಾಧಯಕ್ಷನಿಗೆ ನೋಟಿಸ್ ಕೊಟ್ರೂ ಡೋಂಟ್ ಕೇರ್

ಮಂಡ್ಯ: ಕೊರೊನಾ ನಿಯಮಗಳು ಜನಸಾಮಾನ್ಯರಿಗಷ್ಟೇ ಸೀಮಿತವಾ ಎಂಬ ಪ್ರಶ್ನೆ ಮತ್ತೊಮ್ಮೆ ಮೂಡಿದೆ. ಈ ಹಿಂದೆಯೂ ಹಲವಾರು ಬಾರಿ ಬಿಜೆಪಿಯವರು ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಇದೀಗ ಮತ್ತೆ ಪೊಲೀಸರ ಎಚ್ಚರಿಕೆಯನ್ನು ಧಿಕ್ಕರಿಸಿ ಮಂಡ್ಯದಲ್ಲಿ ಬೃಹತ್ ರ‍್ಯಾಲಿ ಮಾಡುವ ಮೂಲಕ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.

ಹೌದು. ಮಂಡ್ಯ ಜಿಲ್ಲೆಯಲ್ಲಿ ಪೊಲೀಸರ ಆದೇಶಕ್ಕೆ ಕಿಮ್ಮತ್ತೇ ಇಲ್ವಾ ಅನ್ನೋ ಪ್ರಶ್ನೆ ಮೂಡಿದೆ. ಕಾರ್ಯಕ್ರಮ ನಡೆಸಲು ಅನುಮತಿ ಇಲ್ಲ ಎಂದು ಮಂಡ್ಯ ಪೊಲೀಸರು ಬಿಜೆಪಿ ಜಿಲ್ಲಾಧ್ಯಕ್ಷನಿಗೆ ತಿಳಿಸಿದ್ದಾರೆ. ಆದರೆ ಇದೀಗ ಪೊಲೀಸರ ಎಚ್ಚರಿಕೆಗೆ ಕ್ಯಾರೇ ಎನ್ನದೇ ಬಿಜೆಪಿ ಮುಖಂಡರು ರಾಜ್ಯ ಮಟ್ಟದ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಿದ್ದಾರೆ. ಬಿಜೆಪಿಯವರ ಈ ನಡೆ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ತಾಲಿಬಾನಿಗಳು ಹುಡುಕುತ್ತಾ ನನ್ನ ಮನೆಗೆ ಬಂದ್ರು: ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್

ಬೈಕ್ ರ‍್ಯಾಲಿ, ಸಾವಿರಾರು ಕಾರ್ಯಕರ್ತರನ್ನ ಸೇರಿಸಿ ಮಂಡ್ಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಭಾಗಿಯಾಗಿದ್ದಾರೆ. ಕಲ್ಯಾಣ ಮಂಟಪದಲ್ಲಿ ಮದುವೆಗೆ 100 ಜನಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ನಿಯಮವಿದ್ದು, ಆದರೆ ಅಧಿಕಾರದಲ್ಲಿರುವ ಬಿಜೆಪಿ ನಾಯಕರಿಗೆ ಈ ನಿಯಮ ಅನ್ವಯಿಸಲ್ವಾ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಜಿಲ್ಲಾಧ್ಯನಿಗೆ ನೋಟಿಸ್:
ಸಭೆ ನಡೆಸಿದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‍ಕುಮಾರ್ ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಕೊರೊನಾ ನಿಯಮಗಳನ್ನು ಪಾಲನೆ ಮಾಡದೇ ಸಭೆ ಮಾಡಲಾತ್ತಿದೆ. ನೂರಾರು ಜನರನ್ನು ಸೇರಿಸಿಕೊಂಡು ಬೈಕ್ ರ‍್ಯಾಲಿ ಮಾಡುತ್ತಿದ್ದೀರಿ. ಈ ರೀತಿಯ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ ಎಂದು ಪೊಲೀಸರು ನೋಟಿಸ್ ನಲ್ಲಿ ತಿಳಿಸಿದ್ದಾರೆ.

ಜಿಲ್ಲಾಧ್ಯಕ್ಷನಿಗೆ ನೋಟಿಸ್ ನೀಡಿದರೂ ಬಿಜೆಪಿ ಮುಖಂಡರು ಬೈಕ್ ರ‍್ಯಾಲಿ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ನಾರಾಯಣಗೌಡ, ಮಾಜಿ ಸಚಿವ ಎ.ಮಂಜು ಇತರರು ಜೀಪ್ ನಲ್ಲಿ ಮೆರವಣಿಗೆ ಮಾಡಿದ್ದಾರೆ. ರ‍್ಯಾಲಿಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಮಾಯವಾಗಿದೆ. ಇನ್ನು ಸಭೆಯಲ್ಲಿ ಕೂಡ ನೂರಾರು ಮಂದಿ ಭಾಗಿಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *