ಗ್ರೀನ್ ಝೋನ್‌ನಲ್ಲಿರುವ ಜಿಲ್ಲೆಗಳಲ್ಲಿ ನಿರ್ಲಕ್ಷ್ಯ- ಸಾಮಾಜಿಕ ಅಂತರ, ಮಾಸ್ಕ್ ಮರೀಚಿಕೆ

Public TV
1 Min Read

ಬೆಂಗಳೂರು: ಗ್ರೀನ್ ಝೋನ್ ನಲ್ಲಿರುವ ಜಿಲ್ಲೆಗಳಲ್ಲಿ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಲಾಕ್‍ಡೌನ್ ಸಡಿಲಿಕೆ ಮಾಡಿದ್ದು, ಜನ ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ರಾಯಚೂರು, ಕೊಪ್ಪಳ, ಯಾದಗಿರಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ನಿರ್ಲಕ್ಷ್ಯದಿಂದ ಓಡಾಡುತ್ತಿದ್ದಾರೆ.

ರಾಯಚೂರಿನಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ಜನ ನಿಯಮಗಳನ್ನು ಪಾಲಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಮಾರುಕಟ್ಟೆ ಪ್ರದೇಶಗಳು ಜನಜಂಗುಳಿಯಿಂದ ಕೂಡಿದ್ದು, ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಕೊಪ್ಪಳದಲ್ಲಿ ಸಹ ಕಟ್ಟೆಚ್ಚರ ವಹಿಸಲಾಗಿದ್ದು, ಇದರ ಮಧ್ಯೆಯೂ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಎಪಿಎಂಸಿ ಮಾರ್ಕೆಟ್ ನಲ್ಲಿ ಜನಜಂಗುಳಿ ಉಂಟಾಗಿದ್ದು, ವ್ಯಾಪಾರಿಗಳು ರೈತರಿಂದ ತರಕಾರಿ ತೆಗೆದುಕೊಳ್ಳು ಮುಗಿಬಿದ್ದಿದ್ದಾರೆ. ಈ ಹಿಂದೆ ವಾರಕ್ಕೊಂದು ಬಾರಿ ನಡೆಯುವ ಮಾರ್ಕೆಟ್ ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಅಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕಾರಣಹಾಗೂ ಮಾಸ್ಕ್ ಧರಿಸಿದ ಕಾರಣ ತರಕಾರಿ ಮಾರ್ಕೆಟ್‍ನ್ನು ಎಪಿಎಂಸಿಗೆ ಶಿಫ್ಟ್ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಮಾಸ್ಕ್ ಗಳನ್ನು ಧರಿಸಬೇಕು ಎಂದು ವ್ಯಾಪಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ. ಆದರೂ ಇಲ್ಲಿ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ.

ಗ್ರೀನ್ ಝೋನ್ ನಲ್ಲಿರುವ ಯಾದಗಿರಿಯಲ್ಲಿ ಸಹ ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದೆ. ನಗರದಲ್ಲಿ ವ್ಯಾಪಾರ-ವಹಿವಾಟು ಜೋರಾಗಿದೆ ಸಾಗಿದೆ. ಬಸವ ಜಯಂತಿ ಹಿನ್ನೆಲೆ ಅಕ್ಕ-ಪಕ್ಕದ ಹಳ್ಳಿಗಳಿಂದ ಜನ ಧಾವಿಸಿ ಹಬ್ಬದ ಸಂತೆ ಮಾಡುತ್ತಿದ್ದಾರೆ. ಆದರೆ ಸಾಮಾಜಿಕ ಅಂತರವನ್ನು ಮರೆತಿದ್ದಾರೆ. ನಗರಸಭೆಯಿಂದ ಈಗಾಗಲೇ ನಗರದ ವಿವಿಧೆಡೆ ಕೊರೊನಾ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕ ಮಾರುಕಟ್ಟೆಗಳನ್ನು ತರೆಯಲಾಗಿದೆ. ಆದರೂ ಜನ ಈ ಮಾರುಕಟ್ಟೆಗಳನ್ನು ಬಿಟ್ಟು ಅದರ ಪಕ್ಕದಲ್ಲಿರುವ ಜಾಗವನ್ನು ನೆಚ್ಚಿಕೊಂಡಿದ್ದಾರೆ. ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು, ಮಾಸ್ಕ್ ಧರಿಸುತ್ತಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ.

Share This Article
Leave a Comment

Leave a Reply

Your email address will not be published. Required fields are marked *