24 ಗಂಟೆಯಲ್ಲಿ ಭಾರತದಲ್ಲಿ 57 ಮಂದಿ ಸಾವು – 24,506ಕ್ಕೆ ಏರಿದ ಸೋಂಕಿತರ ಸಂಖ್ಯೆ

Public TV
2 Min Read

– 775 ಮಂದಿ ಸೋಂಕಿಗೆ ಬಲಿ
– 24 ಗಂಟೆಯಲ್ಲಿ 1,429 ಹೊಸ ಪ್ರಕರಣ ಪತ್ತೆ

ನವದೆಹಲಿ: ದಿನೇ ದಿನೇ ಭಾರತದಲ್ಲಿ ಕೊರೊನಾ ರಣಕೇಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 24,506ಕ್ಕೆ ಏರಿದೆ.

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಬರೋಬ್ಬರಿ 1,429 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈವರೆಗೆ 775 ಮಂದಿಯನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದ್ದು, ಈವರೆಗೆ 6,817 ಮಂದಿಗೆ ಸೋಂಕು ತಗುಲಿದ್ದು, 301 ಮಂದಿ ಸಾವನ್ನಪ್ಪಿದ್ದಾರೆ. ಹೆಚ್ಚು ಸೋಂಕು ಹರಡಿರುವ ರಾಜ್ಯಗಳ ಪಟ್ಟಿಯಲ್ಲಿ ಗುತರಾತ್ 2ನೇ ಸ್ಥಾನದಲ್ಲಿದ್ದು, ಅಲ್ಲಿ 2,815 ಮಂದಿ ಕೊರೊನಾಗೆ ತುತ್ತಾಗಿದ್ದು, 127 ಮಂದಿ ಸಾವನ್ನಪ್ಪಿದ್ದಾರೆ.

ಇತ್ತ ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 2,514ಕ್ಕೆ ಏರಿದ್ದು, 53 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜಸ್ಥಾನದಲ್ಲಿ 2,059 ಮಂದಿಗೆ ಸೋಂಕು ತಗುಲಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ ಈವರೆಗೆ 489 ಮಂದಿ ಕೊರೊನಾಗೆ ತುತ್ತಾಗಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 15 ಹೊಸ ಪ್ರಕರಣಗಳು ವರದಿಯಾಗಿದ್ದು, ಈವರೆಗೆ 153 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕೇರಳದಲ್ಲಿ ಕೊರೊನಾ ಈಗ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಈವರೆಗೆ 450 ಮಂದಿಗೆ ಸೋಂಕು ತಗುಲಿದ್ದು, 3 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ 331 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

ಕೊರೊನಾ ವೈರಸ್‍ನಿಂದ ದೇಶದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಇತ್ತ ದಿನೇ ದಿನೇ ಸೋಂಕಿತರ ಸಂಖ್ಯೆ ಕೂಡ ದೇಶದಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್‍ಡೌನ್ ಜಾರಿಗೊಳಿಸಿದ್ದರೂ ಸೋಂಕು ಮಾತ್ರ ಹತೋಟಿಗೆ ಬರುತ್ತಿಲ್ಲ. ದಿನ ಕಳೆದಂತೆ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆಯೇ ಹೊರತಾಗಿ ಕಡಿಮೆಯಾಗುತ್ತಿಲ್ಲ.

ಈ ಮಧ್ಯೆ ಶುಭಸುದ್ದಿಯೆಂದರೆ ರಾಜ್ಯದಲ್ಲಿ ಇಂದು ಮೊದಲ ಪ್ಲಾಸ್ಮಾ ಥೆರಪಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ಕೊರೊನಾದಿಂದ ಗುಣಮುಖರಾದವರೊಬ್ಬರು ತಮ್ಮ ರಕ್ತದ ಪ್ರತಿರೋಧಕ ಕಣಗಳನ್ನು ದಾನ ಮಾಡುತ್ತಾರೆ. ಅವರಿಂದ ಪ್ರತಿರೋಧಕ ಕಣಗಳನ್ನು ಪಡೆದು ಕೊರೊನಾ ಸೋಂಕಿತ ವ್ಯಕ್ತಿಯ ರಕ್ತಕ್ಕೆ ಸೇರಿಸಲಾಗುತ್ತದೆ. ಈ ಚಿಕಿತ್ಸೆಯೇ ಪ್ಲಾಸ್ಮಾ ಥೆರಪಿಯಾಗಿದೆ. ಇಂದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಮಾಡಲಾಗುತ್ತಿದೆ. ಇದರ ಸಫಲತೆ ಆಧರಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ಲಾಸ್ಮಾ ಥೆರಪಿಗೆ ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ.

Share This Article
Leave a Comment

Leave a Reply

Your email address will not be published. Required fields are marked *