– ನಕಲಿ ವಿಳಾಸದ ಟ್ರೇಡರ್ಸ್‌ಗೆ ಲಂಚ ಪಡೆದು ಲೈಸೆನ್ಸ್ ನೀಡಿದ ಆರೋಪ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ (Siddaramaiah Government) ಒಂದು ಕಡೆ ಸುಭದ್ರ ಆಡಳಿತ ಕೊಡುತ್ತಿದೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ಒಂದಿಲ್ಲೊಂದು ಭ್ರಷ್ಟಾಚಾರ ಆರೋಪ ಕೇಳಿಬರುತ್ತಲೇ ಇದೆ. ಆರ್.ಬಿ ತಿಮ್ಮಾಪೂರ್, ಕೆಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್. ಎಂ.ಬಿ ಪಾಟೀಲ್ ಅವರ ಬಳಿಕ ಈಗ ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬರು ಪ್ರಭಾವಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ.

ಎಪಿಎಂಸಿ (AMPC) ಮಳಿಗೆ ಹಸ್ತಾಂತರ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ (Shivanand Patil) ಹಾಗೂ ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ ಅವರ ವಿರುದ್ಧ ಎಪಿಎಂಸಿ ವರ್ತಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇದನ್ನೂ ಓದಿ: 2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್ ಸ್ಥಾಪನೆಗೆ ಚಿಂತನೆ

ಅನಧಿಕೃತ ಮಳಿಗೆಗಳಿಗೆ ಲೈಸೆನ್ಸ್ ನೀಡಿದ್ದಾರೆ, ಪರವಾನಗಿ ರಿನಿವಲ್‌ನಲ್ಲಿ ಅಕ್ರಮ ಎಸಗಿದ್ದಾರೆ. ನಕಲಿ ವಿಳಾಸದ ವರ್ತಕರಿಗೆ ಲಂಚ ಪಡೆದು ಲೈಸೆನ್ಸ್ (License) ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

ಈ ಸಂಬಂಧ ಲೋಕಾಯುಕ್ತಕ್ಕೆ (Lokayukta) ದೂರು ನೀಡಲಾಗಿದ್ದು, ಈ ಬೆನ್ನಲ್ಲೇ ರಾಜಭವನಕ್ಕೂ ಎಪಿಎಂಸಿ ವರ್ತಕರು ದೂರು ನೀಡಿದ್ದಾರೆ. ಸದ್ಯ ಈ ಬಗ್ಗೆ ಸಚಿವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: ಮೆಸೇಜ್, ಕಾಲ್ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

