ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ಕೌನ್ಸಿಲಿಂಗ್- ಪ್ರದೀಪ್

Public TV
1 Min Read

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರುಗಳನ್ನು ಪ್ರಕಟಿಸಲಾಗಿದೆ. ಇಲಾಖೆಯ ಇಎಂಐಎಸ್ ತಂತ್ರಾಂಶದಲ್ಲಿ ಲಭ್ಯವಿರುವ ಅಭ್ಯರ್ಥಿಗಳ ಸೇವಾ ವಿವರಗಳನ್ನು ಪರಿಗಣಿಸಿ, ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲಾಗುವುದು. ಈ ಮಾಹಿತಿಯಲ್ಲಿ ಬದಲಾವಣೆ / ಆಕ್ಷೇಪಣೆ ಇದ್ದಲ್ಲಿ ಏಪ್ರಿಲ್‌ 6ರ ಒಳಗೆ ಇಲಾಖೆಯ ಇ-ಮೇಲ್ dce.postshifting2022@gmail.com ಗೆ ಸಲ್ಲಿಸಬಹುದು ಎಂದಿದ್ದಾರೆ.

ಇದನ್ನು ಆಧರಿಸಿ, ಏ.7ರಂದು ಹುದ್ದೆ ಸ್ಥಳಾಂತರ ಮತ್ತು ಹೆಚ್ಚುವರಿ ಕಾರ್ಯಭಾರ ಲಭ್ಯವಿರುವ ಕಾಲೇಜುಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮರುದಿನ, ಅಂದರೆ ಏಪ್ರಿಲ್‌ 8ರಂದು ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.  ಇದನ್ನು ಓದಿ:ಕುವೈತ್‌ನಲ್ಲಿ ದಳಪತಿ ವಿಜಯ್ ನಟನೆಯ `ಬೀಸ್ಟ್’ ಸಿನಿಮಾ ಬ್ಯಾನ್

ನಿಯಮಗಳ ಪ್ರಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲೆ, ವಾಣಿಜ್ಯ ಮತ್ತು ಭಾಷಾ ವಿಷಯಗಳ ಬೋಧಕರಿಗೆ ವಾರಕ್ಕೆ 16 ಗಂಟೆ ಮತ್ತು ಪ್ರಾಯೋಗಿಕ ತರಗತಿಗಳಿರುವ ವಿಷಯಗಳ ಬೋಧಕರಿಗೆ 20 ಗಂಟೆಗಳ ಕಾರ್ಯಭಾರ ಇರಬೇಕು ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾದ ಮೈಸೂರಿನ ಶಿಲ್ಪಿ ಯೋಗಿರಾಜ್ ಅರುಣ್

ವರ್ಗಾವಣೆ ಪ್ರಕ್ರಿಯೆಯಲ್ಲಿ ಸಾಧ್ಯವಾದಷ್ಟೂ ಮಟ್ಟಿಗೆ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿರುವ ವಲಯದೊಳಗೇ ವರ್ಗಾವಣೆ ಮಾಡಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *