ತಾಯಿ, ಸಹೋದರಿಯರಿಗೆ ಅವಮಾನ – ದೇಶವೇ ಮಣಿಪುರದೊಂದಿಗೆ ನಿಂತಿದೆ: ಮೋದಿ

Public TV
1 Min Read

ನವದೆಹಲಿ: ಕಳೆದ ಕೆಲವು ವಾರಗಳಿಂದ ಮಣಿಪುರ (Manipur) ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಇದರಲ್ಲಿ ನಮ್ಮ ತಾಯಿ ಮತ್ತು ಸಹೋದರಿಯರಿಗೆ ಅವಮಾನವಾಯಿತು. ಈಗ ನಿಧಾನವಾಗಿ ಈ ಪ್ರದೇಶದಲ್ಲಿ ಶಾಂತಿ ಮರಳುತ್ತಿದೆ. ಭಾರತವು ಮಣಿಪುರದೊಂದಿಗೆ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

77ನೇ ಸ್ವಾತಂತ್ರ್ಯೋತ್ಸವದ (Independence Day) ಭಾಷಣ ಮಾಡಿದ ಅವರು, ಶಾಂತಿ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಶ್ರಮಿಸುತ್ತಿವೆ. ಅಲ್ಲದೇ ಶಾಂತಿಯನ್ನು ಮರು ಸ್ಥಾಪಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳಲಾಗುತ್ತಿದೆ. ಏಕತೆಯ ಬಗ್ಗೆ ಮಾತನಾಡುವಾಗ ಮಣಿಪುರದಲ್ಲಿ ಹಿಂಸಾಚಾರ ನಡೆದರೆ ಅದರ ನೋವು ಮಹಾರಾಷ್ಟ್ರದಲ್ಲೂ ಇರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ 1,000 ವರ್ಷ ಭಾರತಕ್ಕೆ ದಿಕ್ಕು ತೋರಲಿದೆ: ಮೋದಿ

ಮೋದಿಯವರು `ಪರಿವರ್ಜನ್’ (ಕುಟುಂಬ ಸದಸ್ಯರು) ಎಂದು ಉಲ್ಲೇಖಿಸಿ 140 ಕೋಟಿ ಭಾರತೀಯರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಇದು ಅವರು ಪ್ರಧಾನಿಯಾಗಿ 10 ನೇ ಸ್ವಾತಂತ್ರ್ಯ ದಿನದ ಭಾಷಣವಾಗಿದೆ. ಇದೇ ವೇಳೆ ಮಹಾತ್ಮಾ ಗಾಂಧಿ, ಭಗತ್ ಸಿಂಗ್, ರಾಜಗುರು, ಸುಖದೇವ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದ್ದಾರೆ. ಇದನ್ನೂ ಓದಿ: ಮಸೀದಿ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಮಕ್ಕಳು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್