ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್(33) ಹಾಗೂ ಸುಜಾತ(30) ಆತ್ಮಹತ್ಯೆಗೆ ಶರಣಾದ ದಂಪತಿ. ಎರಡು ವರ್ಷಗಳ ಹಿಂದಷ್ಟೇ ವೆಂಕಟೇಶ್ ಹಾಗೂ ಸುಜಾತ ಪ್ರೀತಿಸಿ ಮದುವೆಯಾಗಿದ್ದರು. ದಂಪತಿ ಶನಿವಾರ ತಡರಾತ್ರಿ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭಾನುವಾರ ಬೆಳಗ್ಗೆ ಇಬ್ಬರು ಮನೆಯಿಂದ ಹೊರಗೆ ಬರದಿದ್ದಾಗ ಅನುಮಾನಗೊಂಡು ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನೂ ದಂಪತಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಸದ್ಯ ಈ ಬಗ್ಗೆ ಕೆಎಂ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv