ಬೆಂ-ಮೈ ಎಕ್ಸ್‌ಪ್ರೆಸ್‌ವೇಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ – ದಂಪತಿ ಸಾವು

Public TV
1 Min Read

ರಾಮನಗರ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-mysuru Expressway) ಬುಧವಾರ ತಡರಾತ್ರಿ ನಡೆದಿದೆ.

ಬಿಡದಿ ಸಮೀಪದ ಕೆಂಪನಹಳ್ಳಿ ಗೇಟ್ ಬಳಿ ಅಪಘಾತ (Accident) ಸಂಭವಿಸಿದೆ, ಮೃತರನ್ನು ಸನಾವುಲ್ಲಾ ಬೇಗ್ (65) ಹಾಗೂ ನೂರ್‌ಜಹಾನ್ (60) ಎಂದು ಗುರುತಿಸಲಾಗಿದೆ. ಮೃತ ದಂಪತಿ ಬೆಂಗಳೂರಿನ ಬಾಪೂಜಿ ನಗರ ನಿವಾಸಿಗಳು. ಇದನ್ನೂ ಓದಿ: ಕರೆಂಟ್ ಶಾಕ್ – ಬರೋಬ್ಬರಿ 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮೈಶುಗರ್ ಕಾರ್ಖಾನೆ

ಕಾರ್ಯಕ್ರಮವೊಂದರ ನಿಮಿತ್ತ ರಾಮನಗರಕ್ಕೆ ಬಂದಿದ್ದ ಇಬ್ಬರು ರಾತ್ರಿ ವಾಪಸ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಲಾರಿಗೆ ರಿಫ್ಲೆಕ್ಟರ್ ಇಲ್ಲದ ಕಾರಣ ವೇಗವಾಗಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಚಾಲಕ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್