ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

1 Min Read

ರಾಯಚೂರು: ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದ ದಂಪತಿ (Couple) ಮೇಲೆ ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಗ್ರಾಮದ 38 ವರ್ಷದ ದ್ಯಾವಪ್ಪ ಸೂಗುರು, ಆತನ ಪತ್ನಿ 32 ವರ್ಷದ ಶಿವಮ್ಮ ಮೃತ ದುರ್ದೈವಿಗಳು. ಗೌಂಡಿ ಕೆಲಸ ಮಾಡುತ್ತಿದ್ದ ದಂಪತಿಗಳ ಮೇಲೆ ಏಕಾಏಕಿ ಮೆಟ್ಟಿಲು ಕುಸಿದು ಬಿದ್ದಿದೆ. ಗೌಂಡಿ ಕೆಲಸ ಮಾಡುತ್ತಿದ್ದ ಪಕ್ಕದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

ಪಿಲ್ಲರ್ ಇಲ್ಲದೆ ಅವೈಜ್ಞಾನಿಕವಾಗಿ ನಿರ್ಮಿಸಿದ್ದ ಮೆಟ್ಟಿಲು ಕುಸಿತವಾಗಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Share This Article