ನಿಂತಿದ್ದ ಕಾರಿಗೆ ಕಂಟೇನರ್ ಲಾರಿ ಡಿಕ್ಕಿ – ದಂಪತಿ ಸಾವು

0 Min Read

ಬೆಳಗಾವಿ: ಕಂಟೇನರ್ ಲಾರಿ (Container Lorry) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ (Car) ದಂಪತಿ ಮೃತಪಟ್ಟ ಘಟನೆ ಬೆಳಗಾವಿ (Belagavi) ನಿಪ್ಪಾಣಿ ತಾಲೂಕಿನ ಕೂಗನೋಳ್ಳಿ ಬಳಿ ನಡೆದಿದೆ.

ಕೊಲ್ಲಾಪುರ ಮೂಲದ ಜಿಗರ್ ನಾಕ್ರಾನಿ ಮತ್ತು ಹೇತಿಕಾ ನಾಕ್ರಾನಿ ಮೃತಪಟ್ಟ ದುರ್ದೈವಿಗಳು. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವ ವೇಳೆ ಕುಗನೋಳ್ಳಿ ಬಳಿ ಕಾರು ನಿಲ್ಲಿಸಲಾಗಿತ್ತು. ಇದನ್ನೂ ಓದಿ: ವಿದೇಶದಲ್ಲಿ ನಾನು ಭಾರತದ ವಿರುದ್ಧ ಮಾತನಾಡಲ್ಲ: ಡಿಕೆಶಿ

ಈ ವೇಳೆ ರಭಸದಿಂದ ಬಂದ ಕಂಟೇನರ್ ವಾಹನ ಡಿಕ್ಕಿ ಹೊಡೆದಿದೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗೇ ದೆ ಮೃತಪಟ್ಟಿದ್ದಾರೆ. ನಿಪ್ಪಾಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article