ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಜೈಲು ಸೇರಿರೋ ನಟ ದರ್ಶನ್, ಜೈಲಲ್ಲಿ ಯಾವುದೇ ಸೌಕರ್ಯ ನೀಡುತ್ತಿಲ್ಲ. ನ್ಯಾಯಾಧೀಶರೇ ಖುದ್ದು ಪರಿಶೀಲಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅ.10ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರ ವಕೀಲ ಸುನಿಲ್ ಕುಮಾರ್ ವಾದ ಮಂಡಿಸಿ, ನಮಗೆ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಹಾಗಾಗಿ ಪದೇ ಪದೇ ಅರ್ಜಿ ಹಾಕುತ್ತಿದ್ದೇವೆ. ಈ ಬಗ್ಗೆ ಜಡ್ಜ್ ಪರಿಶೀಲನೆ ಮಾಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಎಸ್‍ಪಿಪಿ, ಅರ್ಜಿಯೇ ಊರ್ಜಿತವಲ್ಲ. ಯೋಗ್ಯವಲ್ಲದ ಅರ್ಜಿ ಇದು, ವಜಾ ಮಾಡುವಂತೆ ಮನವಿ ಮಾಡಿದರು. ಇದು ಟ್ರಯಲ್ ತಪ್ಪಿಸಿಕೊಳ್ಳುವ ಪ್ರಯತ್ನ ಎಂದು ಆರೋಪಿಸಿದರು. ಇದನ್ನೂ ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ರೇಣುಕಾಸ್ವಾಮಿ ಕೊಲೆ ಕೇಸಿನ ವಿಚಾರಣೆ ಸಂಬಂಧ, ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟಿಗೆ ಹಾಜರುಪಡಿಸಲಾಗಿತ್ತು. ಮೂವರು ಆರೋಪಿಗಳು ಗೈರು ಹಾಜರಾಗಿದ್ದರಿಂದ ಅರ್ಜಿಯ ವಿಚಾರಣೆಯನ್ನು ಅ.18ಕ್ಕೆ ಮುಂದೂಡಿಕೆ ಮಾಡಲಾಗಿದೆ. ಇದನ್ನೂ ಓದಿ: ಮುಡಾ ಕೇಸ್ – 2 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶ