ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್‌ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

Public TV
1 Min Read

ಬೆಂಗಳೂರು/ಚಿಕ್ಕಮಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಶೃಂಗೇರಿ ಶಾಸಕ ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್‌ ಹೊಸೂರು ಅರ್ಜಿ ಸಲ್ಲಿಸಿದ್ದರು. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು.

ಅರ್ಜಿ ಸಂಬಂಧ ಬುಧವಾರ ವಿಚಾರಣೆ ನಡೆಸಿದ್ದ ಕೋರ್ಟ್ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಆದೇಶ ಹೊರಡಿಸಿದೆ. ಶಾಸಕರ ಪತ್ನಿ ಹಾಗೂ ಮಗನ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆಗೆ ಆದೇಶ ನೀಡಿದೆ.

60 ದಿನದ ಒಳಗೆ ತನಿಖಾ ವರದಿ ಸಲ್ಲಿಸಲು ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿದೆ.

Share This Article