ಎಂಎಲ್‌ಸಿ ಸೂರಜ್ ರೇವಣ್ಣಗೆ ಸಂಕಷ್ಟ – SIT ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿದ ಕೋರ್ಟ್‌

1 Min Read

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಎಂಎಲ್‌ಸಿ ಸೂರಜ್ ರೇವಣ್ಣಗೆ (Suraj Revanna) ಮತ್ತೆ ಸಂಕಷ್ಟ ಎದುರಾಗಿದೆ. ಎಸ್‌ಐಟಿ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ನ್ನು ನ್ಯಾಯಾಲಯ ತಿರಸ್ಕರಿಸಿದೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ CIDಯ ಎಸ್‌ಐಟಿ ಅಧಿಕಾರಿಗಳು ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ.. ಆರೋಪಕ್ಕೆ ಸಂಬಂಧಿಸಿದಂತೆ ಸಾಂದರ್ಭಿಕ ಸಾಕ್ಷ್ಯಗಳು ಇಲ್ಲ ಎಂದು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಆದರೆ, ಎಸ್‌ಐಟಿ ಅಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ದೂರುದಾರ ಪ್ರಶ್ನೆ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ 42 ನೇ ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅನ್ನು ತಿರಸ್ಕಾರ ಮಾಡಿದೆ. ಇದನ್ನೂ ಓದಿ: ಡಿವೋರ್ಸ್ ತಡೆಗೆ ರಾಜ್ಯ ಸರ್ಕಾರದಿಂದ ‘ಕೂಡಿ ಬಾಳೋಣ’ ಕೌನ್ಸಿಲಿಂಗ್ ಸೆಂಟರ್

ಮತ್ತೆ ತನಿಖೆ ನಡೆಸಿ ಇದೇ ತಿಂಗಳು 29 ಕ್ಕೆ ಅಂತಿಮ ವರದಿ ಸಲ್ಲಿಸಲು ಸೂಚಿಸಿದೆ. ಈ ಮೂಲಕ ಪ್ರಕರಣದಿಂದ ಪಾರಾಗಿದ್ದ ಸೂರಜ್ ರೇವಣ್ಣ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

Share This Article