ಮನೆ ಬಳಿಯೇ ಮಿಸೈಲ್‌ ದಾಳಿ – ಬಂಕರ್‌ನಲ್ಲಿ ಅಡಗಿ ಕುಳಿತ ಪಾಕ್‌ ಪ್ರಧಾನಿ

Public TV
1 Min Read

ಇಸ್ಲಾಮಾಬಾದ್: ಪಹಲ್ಗಾಮ್‌ ಉಗ್ರರ ದಾಳಿಗೆ ಭಾರತದ (India) ಪ್ರತೀಕಾರ ಮುಂದುವರೆದಿದ್ದು, ಪಾಕ್‌ (Pakistan) ತತ್ತರಿಸಿ ಹೋಗಿದೆ. ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ನಿವಾಸದ ಸಮೀಪದಲ್ಲೇ ಸ್ಫೋಟ ಸಂಭವಿಸಿದ್ದು, ಪ್ರಾಣಭಯದಲ್ಲಿ ಅವರು ಬಂಕರ್‌ ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪಾಕ್‌ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಶೆಹಬಾಜ್‌ ಶರೀಫ್‌ ಅವರ ಮನೆಯಿದೆ. ಆ ಮನೆಯಿಂದ 20 ಕಿಮೀ ದೂರದಲ್ಲೇ ಭಾರೀ ಸ್ಫೋಟದ ಸದ್ದಾಗಿದೆ. ಇದರಿಂದ ಪಾಕ್‌ ಪ್ರಧಾನಿ ಬೆಚ್ಚಿದ್ದಾರೆ. ಇದರಿಂದ ಪಾಕಿಸ್ತಾನದಲ್ಲಿ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ಹಲವು ನಗರಗಳು ಕತ್ತಲಲ್ಲಿ ಸಿಲುಕಿವೆ. ಕೆಲವು ನಗರಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ.

ರಸ್ತೆಗಳಿಗೆ ಬಾರದಂತೆ ಪಾಕ್‌ ನಾಗರಿಕರಿಗೆ ಅಲ್ಲಿನ ಸ್ಥಳೀಯ ಆಡಳಿತ ಸೂಚನೆ ನೀಡಿದೆ. ಇದರ ನಡುವೆಯೇ ಪಾಕಿಸ್ತಾನದ ಪೈಲಟ್‌ನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ.

Share This Article