ಸಿಪಿಐ ನಾಯಕ ಅತುಲ್‌ ಕುಮಾರ್‌ ಅಂಜಾನ್‌ ನಿಧನ

Public TV
1 Min Read

ಲಕ್ನೋ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಯ ರಾಷ್ಟ್ರೀಯ ಕಾರ್ಯದರ್ಶಿ ಅತುಲ್ ಕುಮಾರ್ ಅಂಜಾನ್ (Atul Kumar Anjaan) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

70 ವರ್ಷ ವಯಸ್ಸಿನ ಅಂಜಾನ್‌ ಅವರು ಕ್ಯಾನ್ಸರ್‌ (Cancer) ವಿರುದ್ಧ ದೀರ್ಘಕಾಲ ಹೋರಾಟ ನಡೆಸಿದ್ದರು. ಕಳೆದ ಒಂದು ತಿಂಗಳಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಅತುಲ್ ಅಂಜಾನ್ ಅವರು 1977 ರಲ್ಲಿ ಲಕ್ನೋ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಅವರು ಸಕ್ರಿಯ ಕಮ್ಯುನಿಸ್ಟ್ ನಾಯಕರಲ್ಲಿ ಒಬ್ಬರಾಗಿದ್ದ ಅಂಜಾನ್ ಅವರು ಸಾಮಾಜಿಕ ಕಾರ್ಯಕರ್ತರಾಗಿಯೂ ಹೆಸರು ಮಾಡಿದವರಾಗಿದ್ದಾರೆ.

ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿರುವ ಜೊತೆಗೆ ರಾಜಕೀಯದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದರು. ಅಲ್ಲದೇ ರೈತರು ಮತ್ತು ಕಾರ್ಮಿಕರ ಹಿತಾಸಕ್ತಿಗಳಿಗೆ ಅವರ ಅಚಲ ಬದ್ಧತೆಯು ಎಲ್ಲಾ ವರ್ಗದ ಜನರಿಂದ ವ್ಯಾಪಕ ಮೆಚ್ಚುಗೆ ಮತ್ತು ಗೌರವವನ್ನು ಗಳಿಸಿತು.

Share This Article