ಕಲ್ಲಾಗಿ ಬದಲಾದ ಏಡಿ – ಅಘನಾಶಿನಿ ನದಿಯಲ್ಲಿ ವಿಸ್ಮಯ

Public TV
2 Min Read

ಕಾರವಾರ: ಕಲ್ಲಿನಲ್ಲಿ ಏಡಿ ಸಿಗೋದು ನೋಡಿರಬಹುದು. ಆದರೆ ಏಡಿಯೇ ಕಲ್ಲಾಗಿ ಸಿಕ್ಕರೆ ಇದು ಪ್ರಕೃತಿ ವಿಸ್ಮಯವಲ್ಲವೇ? ಹೌದು ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ನುಸಿಕೋಟೆ ಬಳಿ ಮೀನುಗಾರರೊಬ್ಬರಿಗೆ ಕಲ್ಲಾಗಿ ರೂಪುಗೊಂಡ ಏಡಿಯ ದೇಹ ಸಿಕ್ಕಿದೆ. ಈ ಕಲ್ಲಾದ ಏಡಿ ನೂರಾರು ವರ್ಷಗಳ ಹಳೆಯ ಪಳೆಯುಳಿಕೆ ಇರಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ.

ಅಘನಾಶಿನಿ ನದಿಯಲ್ಲಿ (Aghanashini River) ಮೀನುಗಾರಿಕೆ ನಡೆಸುತಿದ್ದ ವೇಳೆ ಮೀನುಗಾರ ಈಶ್ವರ ಹರಿಕಂತ್ರ ಅವರಿಗೆ ಏಡಿ ಕಲ್ಲು (Crab Stone) ಸಿಕ್ಕಿದೆ. ಮೊದಲು ಇದು ಏಡಿ ಎಂದು ಕೈಯಲ್ಲಿ ಹಿಡಿದಾಗ ಸಾಮಾನ್ಯ ಏಡಿಯಂತೆ ಇರದೇ ಕಲ್ಲಿನಂತೆ ಸ್ಪರ್ಷ ಅನುಭವ ಆಗಿದೆ. ಹೀಗಾಗಿ ಈ ಏಡಿಯಲ್ಲಿ ವಿಶೇಷ ಏನೋ ಇದೆ ಎಂದು ಕಾರವಾರದ ಮೀನುಗಾರ ವಿನಾಯಕ ಹರಿಕಂತ್ರ ಎಂಬವರಿಗೆ ಅದನ್ನು ಕಳುಹಿಸಿ ಕೊಟ್ಟಿದ್ದಾರೆ. ಅವರು ಕಾರವಾರದ ಕಡಲ ಜೀವಶಾಸ್ತ್ರಜ್ಞರ ಗಮನಕ್ಕೆ ತಂದು ಹಸ್ತಾಂತರಿಸಿದ್ದಾರೆ. ಆಗಲೇ ತಿಳಿದಿದ್ದು ಈ ಏಡಿ ನದಿಯಲ್ಲಿ ನೂರಾರು ವರ್ಷಗಳು ಸವೆಸಿ ಕಲ್ಲಿನ ರೂಪ ಪಡೆದಿದೆ ಎಂದು.

ಏಡಿ ಕಲ್ಲುಗಳು ಸಮಾನ್ಯವಾಗಿ ಬಂಡೆಕಲ್ಲುಗಳಿರುವ ಕಡಲ ತೀರದಲ್ಲಿ ಪತ್ತೆಯಾಗುತ್ತವೆ. ಆದರೆ ಸಿಹಿ ನೀರಿನ ಅಘನಾಶಿನಿ ನದಿಯಲ್ಲಿ ಕಾಣಸಿಕ್ಕಿದ್ದು ಅಪರೂಪವೆನ್ನುತ್ತಾರೆ ಕಡಲ ಜೀವಶಾಸ್ತ್ರಜ್ಞ ವಿಎನ್ ನಾಯಕ್. ಇದನ್ನೂ ಓದಿ: ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ

ಏಡಿ ಕಲ್ಲು ಏಡಿಯ ಪಳಿಯುಳಿಕೆಯಾಗಿದೆ. ಇದು ನೂರು ವರ್ಷಗಳದ್ದು ಇರಬಹುದು. ಆದರೆ ಕಾರ್ಬನ್ ಡೇಟಿಂಗ್‌ಗೆ ಒಳಪಡಿಸದೇ, ಅದರ ನಿಖರ ಆಯಸ್ಸು ಎಷ್ಟು ಎಂದು ಹೇಳಲು ಆಗುವುದಿಲ್ಲ. ಹೀಗಾಗಿ ಕಡಲ ಜೀವಶಾಸ್ತ್ರಜ್ಞರ ಜೊತೆ ಇದೀಗ ಪುರಾತತ್ವ ಸಂಶೋಧಕರು ಸಹ ಈ ಏಡಿ ಹಿಂದೆ ಬಿದ್ದಿದ್ದು ಇದರ ನಿಜವಾದ ಆಯುಷ್ಯವನ್ನು ಹುಡುಕುವತ್ತ ಗಮನ ಹರಿಸಿದ್ದಾರೆ.


ಒಟ್ಟಿನಲ್ಲಿ ಅಪರೂಪದ ಕಲ್ಲಾಗಿ ಪರಿವರ್ತನೆಗೊಂಡ ಏಡಿ ಪಳಯುಳಿಕೆ ಇದೀಗ ಸಂಶೋಧಕರಿಗೆ ಸಂಶೋಧನೆಯ ವಸ್ತುವಾಗಿದೆ. ಇದನ್ನೂ ಓದಿ: PublicTV Explainer: ಉಗುರಿಗೆ ಹೆದರಿದ ‘ಹೀರೋಸ್‌’; ವನ್ಯಜೀವಿ ಸಂರಕ್ಷಣಾ ಕಾಯ್ದೆ ಏನು ಹೇಳುತ್ತೆ? – ಅಪರಾಧಕ್ಕೆ ಶಿಕ್ಷೆ ಏನು?

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್