ಕ್ರಿಕೆಟ್‌ ಕಿತ್ತಾಟ – ಸ್ನೇಹಿತ, ಸಹೋದರನ ಮೇಲೆ ಗೆಳೆಯರಿಂದ ಮಾರಣಾಂತಿಕ ಹಲ್ಲೆ

Public TV
1 Min Read

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ವೈಷಮ್ಯ ಬೆಳೆದು ತಲ್ವಾರ್‌ನಿಂದ ಸ್ನೇಹಿತ ಹಾಗೂ ಆತನ ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ (Bagalkot Vidyagiri) ನಡೆದಿದೆ.

ಗುರುವಾರ ರಾತ್ರಿ ಶರಣಪ್ಪ ಹಾಗೂ ವಿಜಯ್ ವಿದ್ಯಾಗಿರಿಯ ಎಂಬಿಎ ಕಾಲೇಜ್ ಬಳಿ ನಿಂತಿದ್ದಾಗ ಬೈಕ್ ಮೇಲೆ ಬಂದ ಕೆಲವು ದುಷ್ಕರ್ಮಿಗಳು ಸಹೋದರರ ಮೇಲೆ‌ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇಬ್ಬರ ತಲೆ ಹಾಗೂ ಕೈಗಳಿಗೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿತ್ತು. ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ – ಪಾಲಿಕೆ ಸಿಬ್ಬಂದಿ ಸೇರಿ 9 ಮಂದಿಗೆ ಗಾಯ

ಸ್ಥಳಿಯರು ಇವರಿಬ್ಬರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ವಿಜಯ್ ಎರಡೂ ಕೈಗಳಿಂದ ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ.

 

ನವನಗರ ಪೊಲೀಸರು ತನಿಖೆ ಆರಂಭಿಸಿದಾಗ ಸ್ನೇಹಿತರಿಂದಲೇ ಈ ಹಲ್ಲೆ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ವಿಜಯ್ ಬೇವೂರ್ ಸ್ನೇಹಿತರಾದ ವಿಠ್ಠಲ ಬಂಟನೂರು, ವಿಲಾಸ ಜಾಧವ್‌, ಬಳಿಗೇರ ಹಾಗೂ ಸಮೀರ್ ಮುಲ್ಲಾ ಎಂಬುವರು ಕ್ರಿಕೆಟ್‌ (Cricket) ವಿಚಾರಕ್ಕೆ ನಡೆದ ಜಗಳಕ್ಕೆ ಸಿಟ್ಟಾಗಿ ಹಲ್ಲೆ ನಡೆಸಿರುವ ವಿಚಾರ ಗೊತ್ತಾಗಿದೆ.

ಶರಣಪ್ಪ ಬೇವೂರ್ ಹುಬ್ಬಳ್ಳಿಯಲ್ಲಿ ಮೆಡಿಕಲ್‌ ಓದುತ್ತಿದ್ದ. ಗುರುವಾರ ಅಣ್ಣ ವಿಜಯ ಅವರನ್ನು ಭೇಟಿ ಆಗಲು ಬಂದಿದ್ದ. ಈ ವೇಳೆ ನಾಲ್ವರು ಆರೋಪಿಗಳು ವಿಜಯ್ ಮೇಲೆ ಹಲ್ಲೆ ಮಾಡಲು ಬಂದಿದ್ದಾರೆ. ಆಗ ಸಹೋದರ ಶರಣಪ್ಪ ತಡೆಯಲು ಮುಂದಾದಾಗ ಆತನ ಮೇಲೂ ತಲ್ವಾರ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

 

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಠ್ಠಲ್‌ನನ್ನು ವಶಕ್ಕೆ ಪಡೆಯಲಾಗಿದ್ದು, ಮೂವರ ವಶಕ್ಕಾಗಿ ಬಲೆ ಬೀಸಲಾಗಿದೆ. ಆರೋಪಿಗಳೆಲ್ಲರೂ ಸಿಕ್ಕಿದ ನಂತರವೇ ಹಲ್ಲೆಗೆ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಬಾಗಲಕೋಟೆ ಎಸ್.ಪಿ ಜಯಪ್ರಕಾಶ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್