ನಾಡಹಬ್ಬ ಮೈಸೂರು ದಸರಾಗೆ ಮನಸೋತ ಕ್ರಿಕೆಟ್ ದೈತ್ಯ ಮ್ಯಾಥ್ಯೂ ಹೇಡನ್ ಪುತ್ರಿ

Public TV
1 Min Read

ಮೈಸೂರು: ಕ್ರಿಕೆಟ್ ದೈತ್ಯ ಮ್ಯಾಥ್ಯೂ ಹೇಡನ್ (Matthew Hayden)(ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ) ಅವರ ಪುತ್ರಿ ಗ್ರೇಸ್ ಹೇಡನ್ (Grace Hayden) ಅವರು ಮೈಸೂರಿಗೆ (Mysuru) ಆಗಮಿಸಿ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು (Dasara) ಕಣ್ತುಂಬಿಕೊಂಡಿದ್ದಾರೆ. ಇಲ್ಲಿನ ವೈಭವಕ್ಕೆ ಮನಸೋತಿದ್ದಾರೆ.

ವೃತ್ತಿಯಲ್ಲಿ ಕ್ರೀಡಾ ನಿರೂಪಕಿಯಾಗಿರುವ ಗ್ರೇಸ್ ಹೇಡನ್ ವಿಶ್ವಕಪ್ ಹಿನ್ನೆಲೆ ಭಾರತಕ್ಕೆ ಆಗಮಿಸಿದ್ದರು. ಇದೇ ವೇಳೆ ನವರಾತ್ರಿ ಹಬ್ಬವೂ ನಡೆಯುತ್ತಿದ್ದು, ಹೇಡನ್ ಪುತ್ರಿ ಈ ಬಾರಿ ಮೈಸೂರು ದಸರಾದಲ್ಲಿ ಭಾಗಿಯಾಗಿದ್ದಾರೆ.

ನವರಾತ್ರಿಯ 6ನೇ ದಿನ ಮೈಸೂರಿಗೆ ಆಗಮಿಸಿದ್ದ ಗ್ರೇಸ್ ಮೈಸೂರು ಅರಮನೆ, ಆಹಾರ ಮೇಳ ಸೇರಿದಂತೆ ಹಲವು ಕಡೆ ಭೇಟಿ ನೀಡಿದ್ದರು. ಮೈಸೂರಿನ ಸೌಂದರ್ಯ, ಅರಮನೆಯ ಲೈಟಿಂಗ್ಸ್, ದಸರಾ ಗಜಪಡೆ ಮತ್ತು ದಸರಾ ಸಂಸ್ಕೃತಿಗೆ ಗ್ರೇಸ್ ಫಿದಾ ಆಗಿದ್ದಾರೆ. ಇದನ್ನೂ ಓದಿ: ಜನವರಿ 22ಕ್ಕೆ ರಾಮಮಂದಿರ ಉದ್ಘಾಟನೆ – ಮೋದಿಗೆ ರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನ

ಗ್ರೇಸ್ ಆಹಾರ ಮೇಳದಲ್ಲಿ ಬಂಬೂ ಬಿರಿಯಾನಿ ಸವಿದಿರೋದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇದರ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಒಂದು ಪಂದ್ಯ, ಎರಡು ದಾಖಲೆ; ನೆದರ್ಲೆಂಡ್ಸ್‌ ವಿರುದ್ಧ ಆಸ್ಟ್ರೇಲಿಯಾಗೆ 309 ರನ್‌ಗಳ ಜಯ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್