ಭಾರತ, ಹಿಂದೂ ಧರ್ಮ ಅವಹೇಳನ – ಪಾಕ್‌ ನಿರೂಪಕಿ ಗಡೀಪಾರು

By
1 Min Read

ನವದೆಹಲಿ: ಭಾರತ (India) ಮತ್ತು ಹಿಂದೂ ವಿರೋಧಿ (Anti Hindu) ಟ್ವೀಟ್‌ ಮಾಡಿದ್ದಕ್ಕೆ ಪಾಕಿಸ್ತಾನ (Pakistan) ಕ್ರೀಡಾ ಪತ್ರಕರ್ತೆ ಝೈನಾಬ್ ಅಬ್ಬಾಸ್‌ಳನ್ನು (Zainab Abbas) ಪಾಕಿಸ್ತಾನಕ್ಕೆ ಗಡೀಪಾರು ಮಾಡಿದೆ.

ವಕೀಲ ವಿನೀತ್‌ ಜಿಂದಾಲ್‌ (Vineet Jindal) ಅವರು ದೆಹಲಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಭಾರತ ಮತ್ತು ಹಿಂದೂ ಧರ್ಮವನ್ನು ಅವಹೇಳನ ಮಾಡಿದ ಆರೋಪ ಹೊರಿಸಿ ಜೈನಾಬ್ ಅಬ್ಬಾಸ್‌ ವಿರುದ್ಧ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಐಸಿಸಿ ವಿಶ್ವಕಪ್‌ (ICC World Cup) ನಿರೂಪಕಿ ಸ್ಥಾನದಿಂದ ಕೂಡಲೇ ತೆಗೆದುಹಾಕಬೇಕೆಂದು ಐಸಿಸಿ ಮತ್ತು ಬಿಸಿಸಿಐಗೆ ದೂರು ನೀಡಿದ್ದರು. ಈ ದೂರಿನ ಬೆನ್ನಲ್ಲೇ ಜೈನಾಬ್‌ಳನ್ನು ಪಾಕಿಸ್ತಾನಕ್ಕೆ ಗಡೀಪಾರು ಮಾಡಲಾಗಿದೆ.  ಇದನ್ನೂ ಓದಿ: ಪಾಕ್‌ ಪಂದ್ಯಕ್ಕೆ ಕೇಸರಿ ಜೆರ್ಸಿಯಲ್ಲಿ ಮೆನ್‌ ಇನ್‌ ಬ್ಲೂ ಕಣಕ್ಕೆ – ಬಿಸಿಸಿಐನಿಂದ ಖಡಕ್‌ ಉತ್ತರ

ಈ ಸಂಬಂಧ ಸಮಾ ಟಿವಿ ಟ್ವೀಟ್‌ ಮಾಡಿದ್ದು, ಪಾಕಿಸ್ತಾನಿ ಕ್ರೀಡಾ ನಿರೂಪಕಿ ಝೈನಾಬ್ ಅಬ್ಬಾಸ್ ಅವರು ಸುರಕ್ಷತಾ ಕಾಳಜಿಯಿಂದ ಭಾರತದಿಂದ ನಿರ್ಗಮಿಸಿದ್ದಾರೆ. ಸದ್ಯ ಅವರು ದುಬೈನಲ್ಲಿದ್ದಾರೆ ಎಂದು ಹೇಳಿದೆ.

ನಮ್ಮ ದೇಶ ಮತ್ತು ಹಿಂದೂ ಧರ್ಮವನ್ನು ಗೌರವಿಸುವವರಿಗೆ ಮಾತ್ರ ಅತಿಥಿ ದೇವೋ ಭವ. ಆದರೆ ನಮ್ಮ ಭೂಮಿಯಲ್ಲಿ ಭಾರತೀಯ ವಿರೋಧಿಗಳು ಸ್ವಾಗತಿಸುವುದಿಲ್ಲ ವಿನೀತ್‌ ಜಿಂದಾಲ್‌ ಬರೆದುಕೊಂಡಿದ್ದಾರೆ.

ಈ ಹಿಂದೆ ಭಾರತ ವಿರೋಧಿ ಮಾಡಿದ ಟ್ವೀಟ್‌ ಗಳನ್ನು ಝೈನಾಬ್ ಅಬ್ಬಾಸ್ ಡಿಲೀಟ್‌ ಮಾಡಿದ್ದರೂ ಈಗ ವೈರಲ್‌ ಆಗುತ್ತಿದೆ. ಭಾರತದ ಕ್ರಿಕೆಟ್‌ ಅಭಿಮಾನಿಗಳು ಐಸಿಸಿ, ಬಿಸಿಸಿಐ ನಿರ್ಧಾರವನ್ನು ಸ್ವಾಗತಿಸಿದರೆ ಪಾಕಿಸ್ತಾನದ ಅಭಿಮಾನಿಗಳು ಭಾರತ ಸರ್ಕಾರವನ್ನು ದೂಷಣೆ ಮಾಡಲು ಆರಂಭಿಸಿದ್ದಾರೆ.

 

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್