ಬಾಗಲಕೋಟೆ | ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ರಿಷಭ್‌ ಪಂತ್ ಆರ್ಥಿಕ ನೆರವು

Public TV
2 Min Read

ಬಾಗಲಕೋಟೆ: ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ್ರೂ ಪದವಿ ಪ್ರವೇಶಾತಿಗೆ ಹಣವಿಲ್ಲದೇ ಪರದಾಡುತ್ತಿದ್ದ ವಿದ್ಯಾರ್ಥಿನಿಗೆ ಟೀಂ ಇಂಡಿಯಾ ಆಟಗಾರ ರಿಷಭ್‌ ಪಂತ್ (Rishabh Pant) ಆರ್ಥಿಕ ನೆರವು ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಬಾಗಲಕೋಟೆ (Bagalkote) ತಾಲೂಕಿನ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ್ ಎಂಬ ವಿದ್ಯಾರ್ಥಿನಿ ಪಿಯುಸಿಯಲ್ಲಿ 83% ಅಂಕ ಗಳಿಸಿದ್ದಳು. ಉನ್ನತ ಶಿಕ್ಷಣ ಪಡೆಯಬೇಕು ಎಂದು ಕನಸು ಕಂಡಿದ್ದ ಆಕೆಗೆ ಬಡತನ ಹಾಗೂ ಆರ್ಥಿಕ ತೊಂದರೆ ಕಾಡ ತೊಡಗಿತ್ತು. ಇದನ್ನೂ ಓದಿ: ಉಡಾನ್ ಯೋಜನೆಯಡಿ ಬಳ್ಳಾರಿ, ಕೋಲಾರ ಮಿನಿ ಏರ್‌ಪೋರ್ಟ್‌ಗೆ ಬಿಡ್ ಸ್ವೀಕಾರ: ಕೇಂದ್ರ ವಿಮಾನಯಾನ ಸಚಿವಾಲಯ

ತಂದೆ ತೀರ್ಥಯ್ಯ ಗ್ರಾಮದಲ್ಲಿ ಚಿಕ್ಕದಾದ ಚಹಾದ ಅಂಗಡಿ ನಡೆಸುತ್ತಿದ್ದು, ಅದರಿಂದ ಬಂದ ಹಣದಲ್ಲಿ ಕುಟುಂಬ ನಡೆಸುವುದೇ ಕಷ್ಟವಾಗಿತ್ತು. ಇಂತಹ ಕಿತ್ತು ತಿನ್ನುವ ಬಡತನದಲ್ಲಿ ಮಗಳಿಗೆ ಶಿಕ್ಷಣ ಕೊಡಿಸೋದು ಅವ್ರಿಗೆ ಗಗನ ಕುಸುಮವಾಗಿತ್ತು. ಇದನ್ನೂ ಓದಿ: ಆವತ್ತು ಸೈಕಲ್; ಇವತ್ತು ಸ್ಕೂಟರ್ – ಹೊಸ ಫ್ಲೈಓವರ್ ಮೇಲೆ ಡಿಕೆಶಿ ಸ್ಕೂಟರ್ ಸವಾರಿ

ಮಗಳು ಕಲಿಕೆಗೆ ಪರದಾಡುತ್ತಿದ್ದ ಈ ಸಂದರ್ಭದಲ್ಲಿ ಗ್ರಾಮದವರಾದ ಗುತ್ತಿಗೆದಾರ ಅನಿಲ್ ಹುಣಶಿಕಟ್ಟಿ ಅವರನ್ನು ಜಮಖಂಡಿ ಬಿಎಲ್‌ಡಿಇ ಸಂಸ್ಥೆಯ ಕಾಲೇಜಿನಲ್ಲಿ ಬಿಸಿಎಗೆ ಸೀಟ್ ಕೊಡಿಸುವಂತೆ ಕೋರಿಕೊಂಡಿದ್ದರು. ಅವರು ಸೀಟ್ ಕೊಡಿಸುವ ಜೊತೆಗೆ ಆರ್ಥಿಕ ನೆರವು ಒದಗಿಸುವುದಕ್ಕೂ ಪ್ರಯತ್ನಿಸುವ ಭರವಸೆ ನೀಡಿದ್ದರು.

ಅನಿಲ್ ಅವರು ರಿಷಭ್‌ ಪಂತ್ ಅವರಿಗೆ ಆತ್ಮೀಯರಾಗಿರುವ ಹಿನ್ನೆಲೆ ಈ ವಿಚಾರವನ್ನು ಪಂತ್ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿಯುತ್ತಿದ್ದಂತೆ ಟೀಂ ಇಂಡಿಯಾ ಆಟಗಾರ ಪಂತ್ ಅವರು ಜುಲೈ 17ರಂದು ಬಿಎಲ್‌ಡಿಇ ಕಾಲೇಜಿನ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಮೂಲಕ ವಿದ್ಯಾರ್ಥಿನಿ ಜ್ಯೋತಿಗೆ ಆರ್ಥಿಕ ಬೆಂಬಲವನ್ನು ನೀಡಿದ್ದಾರೆ. ಇದನ್ನೂ ಓದಿ: ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ ಖಚಿತ – ಬಿಜೆಪಿ ಕಾರ್ಯಕರ್ತರ ಸಮಾವೇಶ, ರೋಡ್ ಶೋಗೆ ಕೊಕ್

ವಿದ್ಯಾರ್ಥಿನಿ ಜ್ಯೋತಿಯ ಮೊದಲ ಸೆಮಿಸ್ಟರ್‌ನ ಶುಲ್ಕ 40 ಸಾವಿರ ರೂ. ಹಣವನ್ನು ರಿಷಭ್‌ ಪಂತ್‌ ಪಾವತಿಸಿ ಮಾನವೀಯತೆ ಮರೆದ್ದಾರೆ. ಪುಟ್ಟ ಗ್ರಾಮದ ವಿದ್ಯಾರ್ಥಿನಿಗೆ ಯಾವುದೇ ಅಪೇಕ್ಷೆ ಇಲ್ಲದೆ ರಿಷಬ್ ಪಂತ್ ಅವರು ನೆರವಾಗುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದು, ಅವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗ್ತಿದೆ.

ಅಲ್ಲದೇ ರಿಷಭ್‌ ಪಂತ್ ಅವರ ಸಹಾಯಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರಿಗೆ ದೇವರು ಆಯುಸ್ಸು, ಅಂತಸ್ತು ಆರೋಗ್ಯ ಕೊಟ್ಟು ಕಾಪಾಡಲಿ. ಇನ್ನಷ್ಟು ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಶಕ್ತಿ ದೇವರು ಕರುಣಿಸಲಿ ಎಂದು ಅವರ ಸಹಾಯವನ್ನ ನೆನೆಸಿಕೊಂಡಿದ್ದಾರೆ.

Share This Article