ವಮಿಕಾ ಬಳಿಕ 2ನೇ ಮಗುವಿನ ನಿರೀಕ್ಷೆಯಲ್ಲಿ ಅನುಷ್ಕಾ- ವಿರಾಟ್ ಕೊಹ್ಲಿ ದಂಪತಿ

By
1 Min Read

ಬಾಲಿವುಡ್ ಬ್ಯೂಟಿ ಅನುಷ್ಕಾ ಶರ್ಮಾ- ವಿರಾಟ್ ಕೊಹ್ಲಿ (Virat Kohli) 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಟಿ ಅನುಷ್ಕಾ ಪ್ರೆಗ್ನೆಂಟ್ ಆಗಿದ್ದು, ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂದು ಖಾಸಗಿ ವೈಬ್‌ಸೈಟ್‌ವೊಂದು ವರದಿ ಮಾಡಿದೆ. ಇದನ್ನೂ ಓದಿ:ಹುಟ್ಟುಹಬ್ಬಕ್ಕೆ ಬ್ರೇಕ್‌ ಹಾಕಿದ ರಚಿತಾ- ಸೋಶಿಯಲ್‌ ಮೀಡಿಯಾದಲ್ಲಿ ನಟಿ ಮನವಿ

ಮೂಲಗಳ ಪ್ರಕಾರ, ಸದ್ಯದಲೇ ಅನುಷ್ಕಾ ದಂಪತಿ 2ನೇ ಮಗುವಿನ ಬಗ್ಗೆ ಗುಡ್ ನ್ಯೂಸ್ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ. ತಮ್ಮ ಅಭಿಮಾನಿಗಳಿಗೆ ಈ ಬಗ್ಗೆ ಅಪ್‌ಡೇಟ್ ಹಂಚಿಕೊಳ್ಳುತ್ತಾರೆ ಎನ್ನಲಾಗುತ್ತಿದೆ.

2021ರಲ್ಲಿ ಅನುಷ್ಕಾ (Anushka Sharma) ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈಗ 2ನೇ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಬಿಟೌನ್‌ನಲ್ಲಿ ಗುಸು ಗುಸು ಶುರುವಾಗಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ ಎಂಬುದನ್ನ ಕಾದುನೋಡಬೇಕಿದೆ.

ಡಿಸೆಂಬರ್ 11, 2017ರಲ್ಲಿ ಇಟಲಿಯಲ್ಲಿ ಅನುಷ್ಕಾ- ವಿರಾಟ್ ಅದ್ದೂರಿಯಾಗಿ ಮದುವೆಯಾದರು. ಹಲವು ವರ್ಷಗಳ ಡೇಟಿಂಗ್ ನಂತರ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟರು.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್