ಪ್ರೀತಿ ಹೆಸರಲ್ಲಿ ವಂಚಿಸಿ ಬ್ಲಾಕ್‌ಮೇಲ್ – ಕಿರುಕುಳ ತಾಳಲಾರದೆ ಯುವತಿ ನೇಣಿಗೆ ಶರಣು

1 Min Read

ರಾಮನಗರ: ಪ್ರೀತಿಸಿದ (Love) ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ರಾಮನಗರ (Ramanagar) ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ.

ನೇಣಿಗೆ ಶರಣಾದ ಯುವತಿಯನ್ನು ವರ್ಷಿಣಿ (22) ಎಂದು ಗುರುತಿಸಲಾಗಿದೆ. ಯುವತಿ ಡೆತ್ ನೋಟ್ ಬರೆದಿಟ್ಟು, ಬಾನುವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಳೆದ ಎರಡು ವರ್ಷಗಳಿಂದ ವರ್ಷಿಣಿ ಹಾಗೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಆತ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್‌

ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಮಹಿಳೆ ಬಲಿ ಪಡೆದ ರಾಟ್‌ ವೀಲರ್‌ ಮಾಲೀಕ ಅರೆಸ್ಟ್‌

ಡೆತ್‌ನೋಟ್‌ನಲ್ಲಿ ಏನಿದೆ?
ಸಾಯುವ ಮುನ್ನ ಯುವತಿ ಬರೆದ ಡೆತ್ ನೋಟ್‌ನಲ್ಲಿ ನನ್ನ ಸಾವಿಗೆ ದೇವರದೊಡ್ಡಿ ಗ್ರಾಮದ ಅಭಿ ಎಂಬ ಯುವಕ ಕಾರಣ ಎಂದು ಬರೆದಿದ್ದಾಳೆ. ಅಭಿ ಪ್ರೀತಿ ಹೆಸರಲ್ಲಿ ಮೋಸ ಮಾಡಿದ್ದಾನೆ. ನನ್ನನ್ನು ಬ್ಲಾಕ್‌ಮೇಲ್ ಮಾಡಿ ಪ್ರಗ್ನೆಂಟ್ ಮಾಡಿ ಬಳಿಕ ಗರ್ಭಪಾತ ಮಾಡಿಸಿದ್ದ‌. ಹಣ ಹಾಗೂ ಚಿನ್ನದ ಉಂಗುರ ಪಡೆದು ವಂಚಿಸಿದ್ದಾನೆ. ಈಗ ಮತ್ತೆ ಕಿರುಕುಳ ನೀಡ್ತಿದ್ದಾನೆ. ನನ್ನ ಸಾವಿಗೆ ಕಾರಣವಾದ ಅಭಿಯನ್ನು ಸುಮ್ಮನೆ ಬಿಡಬೇಡಿ. ನನ್ನ ಹಾಗೆ ಯಾರಿಗೂ ಮೋಸ ಆಗಬಾರದು ಎಂದು ಬರೆದಿದ್ದಾಳೆ.

ಯುವತಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸಾವಿಗೆ ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದ್ದಾರೆ. ಮಗಳಿಗೆ ಕಿರುಕುಳ ನೀಡಿರೋ ಅಭಿಯನ್ನು ಕೂಡಲೇ ಬಂಧಿಸಿ, ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದಾರೆ. ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

Share This Article