ಪಾಟ್ನಾ: ಇಲ್ಲಿನ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಮೇಲ್‌ನಲ್ಲಿ ನ್ಯಾಯಾಲಯದ ಆವರಣದಲ್ಲಿ ಆರ್‌ಡಿಎಕ್ಸ್ ಆಧಾರಿತ ಸ್ಫೋಟಕಗಳನ್ನು ಇರಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆದರಿಕೆ ಮೇಲ್ ಸ್ವೀಕರಿಸಿದ ತಕ್ಷಣ ನ್ಯಾಯಾಲಯದಲ್ಲಿ ವಕೀಲರು, ಸಿಬ್ಬಂದಿ, ನ್ಯಾಯಾಧೀಶರು ಮತ್ತು ಕಕ್ಷಿದಾರರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಯಿತು. ಸ್ಥಳಕ್ಕೆ ಪಿರ್‌ಬಹೋರ್ ಪೊಲೀಸ್ ಠಾಣೆಯ ಸಿಬ್ಬಂದಿ, ಬಾಂಬ್ ಡಿಸ್ಪೋಸಲ್ ಸ್ಕ್ವಾಡ್ ಮತ್ತು ಡಾಕ್ ಸ್ಕ್ವಾಡ್ ತಲುಪಿ ಸಂಪೂರ್ಣ ತಪಾಸಣೆ ನಡೆಸಿದರು. ಆದರೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ. ಪೊಲೀಸರು ಇದು ಹುಸಿ ಬಾಂಬ್ ಬೆದರಿಕೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಅಲರ್ಟ್ – ಪ್ರಕರಣ ಭೇದಿಸಲು SIT ರಚಿಸಿದ ಸರ್ಕಾರ
ಇ-ಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ. ಡಿಜಿಟಲ್ ಟ್ರೇಸ್‌ಗಳನ್ನು ಪರಿಶೀಲಿಸುವುದು ಮತ್ತು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಯುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು, ಆತಂಕ ಸೃಷ್ಟಿಸುವ ಯತ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಕಾಸರಗೋಡಿನ (Kasaragodu) ಜಿಲ್ಲಾ ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ ಬಂದಿದ್ದು, ಆವರಣದಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ಐಡಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆದರಿಕೆ ಮೇಲ್ ಬಂದಿದೆ. “ತಕ್ಷಣ, ತಪಾಸಣೆ ನಡೆಸಲು ಬಾಂಬ್ ನಿಷ್ಕ್ರಿಯ ದಳವನ್ನು ನಿಯೋಜಿಸಲಾಯಿತು ಮತ್ತು ನ್ಯಾಯಾಲಯ ಸಂಕೀರ್ಣವನ್ನು ಸ್ಥಳಾಂತರಿಸಲಾಯಿತು. ಇಲ್ಲಿಯವರೆಗೆ ಏನೂ ಪತ್ತೆಯಾಗಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: Video Viral | ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್

