ಪಿರಿಯಾಪಟ್ಟಣ | ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ

1 Min Read

ಮೈಸೂರು: ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬಳು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ (Piriyapatna) ತಾಲೂಕಿನ ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ನೇಣಿಗೆ ಶರಣಾದವರನ್ನು ಹೇಮಲತಾ (38) ಮಕ್ಕಳಾದ ಅನು (15) ಹಾಗೂ ಚೇತನ್ (13) ಎಂದು ಗುರುತಿಸಲಾಗಿದೆ. ಮೂವರು ತಂಬಾಕು ಬ್ಯಾರನ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ನಿಂತಿದ್ದ ಕಾರಿಗೆ ಕಂಟೇನರ್ ಲಾರಿ ಡಿಕ್ಕಿ – ದಂಪತಿ ಸಾವು

ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಸಾವಿಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಅರೋಗ್ಯ ಅಧಿಕಾರಿಯಿಂದ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಆರೋಪ – ಎಫ್‌ಐಆರ್‌ ದಾಖಲು

Share This Article