4ರ ಬಾಲಕಿ ಮೇಲೆ ಅತ್ಯಾಚಾರ: ಇದು ಮಾನವೀಯತೆ ಮೀರಿದ ಕ್ರೌರ್ಯ, ಕಾಮುಕರಿಗೆ ಕ್ಷಮೆಯಿಲ್ಲವೆಂದ ಸಚಿನ್‌ ಪೈಲಟ್‌

Public TV
1 Min Read

ಜೈಪುರ: ರಾಜಸ್ಥಾನದ ಬಿಲ್ವಾರದಲ್ಲಿ (Bhilwara) ಇತ್ತೀಚೆಗೆ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಅತ್ಯಾಚಾರ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ (Sachin Pilot) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಬಿಲ್ವಾರಾದಲ್ಲಿ ಸಂತ್ರಸ್ತ ಕುಟುಂಬವನ್ನ ಭೇಟಿ ಮಾಡಿದ ಸಚಿನ್‌ ಪೈಲಟ್‌ ಸುದ್ದಿಗಾರರೊಂದಿಗೆ ಮಾತನಾಡಿ, ಅಪ್ರಾಪ್ತ ಬಾಲಕಿಯ ಮೇಲೆ ಈ ರೀತಿ ಕ್ರೌರ್ಯ ಮೆರೆದಿರುವುದನ್ನ ಯಾವುದೇ ನಾಗರಿಕ ಸಮಾಜ ಸಹಿಸಲು ಸಾಧ್ಯವಿಲ್ಲ. ಕೃತ್ಯ ಎಸಗಿದ ಕಿಡಿಗೇಡಿಗಳು ಮಾನವೀಯತೆಯ ಎಲ್ಲಾ ಮಿತಿಗಳನ್ನ ದಾಟಿದ್ದಾರೆ. ಅವರಿಗೆ ಯಾವುದೇ ಕಾರಣಕ್ಕೂ ಕ್ಷಮೆ ಎಂಬುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನಾನು ಸಂತ್ರಸ್ತ ಕುಟುಂಬವನ್ನ ಭೇಟಿ ಮಾಡಿದ್ದೇನೆ. ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನ ಬಂಧಿಸಲಾಗಿದೆ. ಇಬ್ಬರೂ ಅಪ್ರಾಪ್ತರನ್ನೂ ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯದಲ್ಲೂ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಸರ್ಕಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಗಳಿಗೆ ಸರ್ಕಾರಿ ಉದ್ಯೋಗ ಕಟ್: ಅಶೋಕ್ ಗೆಹ್ಲೋಟ್

ಇದೇ ಆಗಸ್ಟ್‌ 6 ರಂದು ಬಿಜೆಪಿ (BJP) ಮಹಿಳಾ ಸಂಸದೆ ಸೇರಿದಂತೆ ನಾಲ್ವರು ಸದಸ್ಯರನ್ನೊಳಗೊಂಡ ತಂಡ ಸಂತ್ರಸ್ತ ಕುಟುಂಬವನ್ನ ಭೇಟಿ ಮಾಡಿತ್ತು.  

ಏನಿದು ಘಟನೆ..? 
ಇದೇ ಆಗಸ್ಟ್ 2ರಂದು ಬಿಲ್ವಾರ ಜಿಲ್ಲೆಯಲ್ಲಿ 4 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಿಡಿಗೇಡಿಗಳು ಬಳಿಕ ಕಲ್ಲಿದ್ದಲು ಕುಲುಮೆಯಲ್ಲಿ ಸುಟ್ಟು ಹಾಕಿದ್ದರು. ತನಿಖೆಯಲ್ಲಿದ್ದ ಪೊಲೀಸರಿಗೆ ಕುಲುಮೆ ಬಳಿ ಬಾಲಕಿಯ ಬಟ್ಟೆ ಪತ್ತೆಯಾದ ನಂತರ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿ 7 ಜನರನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್