ತುಮಕೂರು: ನಿಂತಿದ್ದ ಲಾರಿಗೆ ಕ್ರೂಸರ್ (Cruiser) ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಬೆಳ್ಳಾವಿ ಕ್ರಾಸ್ ಸಮೀಪ ನಡೆದಿದೆ.
ಮೃತರೆಲ್ಲರೂ ಕೊಪ್ಪಳ (Koppala) ಮೂಲದವರೆಂದು ತಿಳಿದುಬಂದಿದೆ. ತಮ್ಮೂರಿಗೆ ತೆರಳುತ್ತಿದ್ದ ವೇಳೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ (Accident) ಸಂಭವಿಸಿದೆ. ಇದನ್ನೂ ಓದಿ: Karwar: ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ
ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸ್ಥಳೀಯ ಪೊಲೀಸರು ಮೃತ ದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

