ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಮಾಯಕರಲ್ಲ: ಸಿ.ಟಿ. ರವಿ

Public TV
1 Min Read

ಬೆಂಗಳೂರು: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಮಾಯಕರಲ್ಲ. ಆದರೆ ಜನ ಸೇರಿಸಿ ಪ್ರಕರಣ ಮುಚ್ಚಿ ಹಾಕಲು ಕಾಂಗ್ರೆಸ್ ಹೊರಟಿದೆ. ಕಾಂಗ್ರೆಸ್‍ನವರ ನಡವಳಿಕೆ ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಖಂಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ವಿಚಾರಣೆ ಖಂಡಿಸಿ ಕಾಂಗ್ರೆಸ್‍ನಿಂದ ರಾಷ್ಟ್ರವ್ಯಾಪಿ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವಗೆ ಸಂವಿಧಾನಬದ್ಧ ಸಂಸ್ಥೆಗಳ ಮೇಲೆ ಗೌರವವಿಲ್ಲ. ಗೌರವ ಇದ್ದಿದ್ದರೆ ಇಡಿ ನೋಟಿಸ್ ಯಾಕೆ ಕೊಟ್ಟಿದೆ ಅಂತ ಅರ್ಥ ಮಾಡ್ಕೊಳ್ಳುತ್ತಿದ್ದರು. ಆದರೆ ಕಾಂಗ್ರೆಸ್ ನಾಯಕರು ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಅನ್ನೋ ಥರ ಹೆರಾಲ್ಡ್ ಪ್ರಕರಣದಲ್ಲಿ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಇಡಿ ಸಂವಿಧಾನಬದ್ಧವಾಗಿ ತನಿಖೆ ನಡೆಸುತ್ತಿದೆ. ಮೋದಿಯವರ ಮೇಲೆ ಆರೋಪ ಬಂದಾಗ ಹೇಗೆ ನಡೆದುಕೊಂಡ್ರು ಅಂತ ನೋಡಿ ಕಲಿತುಕೊಳ್ಳಿ. ಸತತ 7 ಗಂಟೆ ಕಾಲ ಮೋದಿಯವರು ಎಸ್‍ಐಟಿ ವಿಚಾರಣೆಗೆ ಹಾಜರಾಗಿದ್ದರು. ಕಾಂಗ್ರೆಸ್‍ನವರ ಥರ ಮೋದಿಯವರು ನಾಟಕ ಆಡಲಿಲ್ಲ ಎಂದರು. ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಗೆ ಮನೆ ಮಗನಂತೆ ಕೆಲಸ ಮಾಡ್ತೀನಿ: ಮುನಿರತ್ನ

Congress

ಮಳೆ ಸಂದರ್ಭದಲ್ಲಿ ಫೈವ್ ಸ್ಟಾರ್ ಹೋಟೆಲಿನಲ್ಲಿ ಶಾಸಕರ ಠಿಕಾಣಿ ವಿಚಾರವಾಗಿ ಮಾತನಾಡಿದ ಅವರು, ಬಹುತೇಕ ಶಾಸಕರು, ಸಚಿವರು ಕ್ಷೇತ್ರ ವೀಕ್ಷಣೆ ಮಾಡಿಯೇ ಬಂದಿದ್ದಾರೆ. ಹಲವರು ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಕ್ಷೇತ್ರದಲ್ಲಿ ಜನರಿಗೆ ಸಮಸ್ಯೆ ಆಗದ ರೀತಿ ಕ್ರಮ ವಹಿಸಿದ್ದಾರೆ. ದೂರವಾಣಿ, ವರ್ಚುವಲ್ ಮೂಲಕ ಸಂಪರ್ಕದಲ್ಲಿದ್ದಾರೆ. ಕ್ಷೇತ್ರದಲ್ಲಿ ಬೇರೆ ಏನಾದರೂ ದೊಡ್ಡ ಸಮಸ್ಯೆ ಆದರೆ ಶಾಸಕರು ಕ್ಷೇತ್ರಗಳಿಗೆ ಭೇಟಿ ಕೊಡ್ತಾರೆ. ಮಳೆ ಸಂತ್ರಸ್ತರನ್ನು ಯಾರು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದರು. ಇದನ್ನೂ ಓದಿ: ನಾನು ಸಿಎಂ ರೇಸ್‍ನಲ್ಲಿ ಇಲ್ಲ : ಸತೀಶ್ ಜಾರಕಿಹೊಳಿ ಸ್ಪಷ್ಟನೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *