ದರ್ಶನ್‍ನಂತೆ ರಾಜಕಾರಣಿಗಳೂ ನಿರ್ಧಾರ ತಗೊಳೋದಾದ್ರೆ ಗಂಟೆಗೊಂದು ಹೆಣ ಬೀಳ್ತಿತ್ತು: ಸಿ.ಟಿ ರವಿ ಖಂಡನೆ

Public TV
1 Min Read

ಚಿಕ್ಕಮಗಳೂರು: ನಟ ದರ್ಶನ್ ಪ್ರಕರಣದ ಸುದ್ದಿ ನಾಗರೀಕ ಸಮಾಜ ತಲೆ ತಗ್ಗಿಸುವಂತದ್ದು. ರಾಜಕಾರಣಿಗಳ ಮೇಳಿನ ಟೀಕೆಗೆ ಅದನ್ನೇ ಮಾಡೋ ಹಾಗಿದ್ರೆ ಗಂಟೆಗೊಂದು ಹೆಣ ಬೀಳುತ್ತಿತ್ತು ಎಂದು ಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಅಂತ ಯಾರೂ ಭಾವಿಸಿರಲಿಲ್ಲ. ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರಲ್ಲ. ದರ್ಶನ್‌ (Challenging Star Darshan) ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ರು ಅನ್ಸತ್ತೆ. ನಮ್ಮ ಪಕ್ಷ ರೇಣುಕಾಸ್ವಾಮಿ ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.

ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ಆ ಕ್ರೌರ್ಯವನ್ನ ಯಾರೂ ಒಪ್ಪಲು ಸಾಧ್ಯವಿಲ್ಲ. ಅವರಿಗೆ ರಾಜಮರ್ಯಾದೆ, ವಿಶೇಷ ಸವಲತ್ತು ಕೊಡ್ತಿದ್ದಾರೆ ಅನ್ನೋದು ಸಂದೇಶವೇ ಒಳ್ಳೆದಲ್ಲ. ಆ ರೀತಿ ಇದ್ರೆ ಬಲ ಇದ್ದವನಿಗೆ, ಬಡವನಿಗೊಂದು ರೀತಿ ಎಂಬ ಸಂದೇಶ ಹೋಗುತ್ತೆ ಎಮದು ಹೇಳಿದರು. ಇದನ್ನೂ ಓದಿ: ಸ್ವಾಮಿ ಶವ ಎಸೆಯೋ ಬಗ್ಗೆ ದರ್ಶನ್ ಮನೆಯಲ್ಲೇ ನಡೆದಿತ್ತು ಸ್ಕೆಚ್!

Share This Article