ಮತ ಬ್ಯಾಂಕಿಗೆ ಸಿದ್ದರಾಮಯ್ಯ ಸರ್ಕಾರ ಬೊಕ್ಕಸವನ್ನು ಲೂಟಿ ಮಾಡಿ ರೈತರ ನಾಶಕ್ಕೆ ಮುಂದಾಗುತ್ತಿದೆ: ಸಿ.ಟಿ.ರವಿ

Public TV
2 Min Read

ಬೆಂಗಳೂರು: ನರೇಂದ್ರ ಮೋದಿ (Narendra Modi) ಅವರ ನೇತೃತ್ವದ ಬಿಜೆಪಿಯ (BJP) ಕೇಂದ್ರ ಸರ್ಕಾರ ರೈತರ, ಜನರ ಹಿತವನ್ನು ಕಾಪಾಡುತ್ತಿದೆ. ಆದರೆ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದಲ್ಲಿ ನೀರಾವರಿಗೂ ಹಣ ಇಲ್ಲ. ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ಭೂಸಿರಿ ಸೇರಿ ಅನೇಕ ಯೋಜನೆಗಳು ರದ್ದಾಗಿವೆ. ರೈತರ ಬೆನ್ನುಮೂಳೆ ಮುರಿಯಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ (CT Ravi) ಅವರು ಟೀಕಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ಬಿಜೆಪಿ (BJP) ಬೆಂಗಳೂರು ಮಹಾನಗರ ರೈತ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಜನವಿರೋಧಿ ಸರಕಾರ. ಮತಬ್ಯಾಂಕಿನ ರಾಜಕಾರಣಕ್ಕಾಗಿ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡಿ ರೈತರ ಸರ್ವನಾಶ ಮಾಡಲು ಈ ಕಾಂಗ್ರೆಸ್ ಸರಕಾರ ಹೊರಟಿದೆ ಎಂದು ಆಕ್ಷೇಪಿಸಿದರು.

ಈ ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಸರ್ಕಾರ ಆಡಳಿತದ ಕೇವಲ 80 ದಿನಗಳಲ್ಲಿ ರಾಜ್ಯದ 50ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಪೂರಿತ ನೀರು ಸೇವಿಸಿ ಹಲವರು ಮೃತಪಟ್ಟಿದ್ದಾರೆ. ಈ ಸರ್ಕಾರ ಬದುಕಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಒಂದು ವರ್ಷದಲ್ಲಿ BCCI ಪಾವತಿಸಿದ ಟ್ಯಾಕ್ಸ್ ಎಷ್ಟು ಗೊತ್ತೆ?

ದಲಿತರು, ಬಡವರು, ರೈತರು ಸೇರಿದಂತೆ ಜನವಿರೋಧಿ ನೀತಿ ಈ ಸರಕಾರದ್ದು ಎಂದ ಅವರು, ಜನಪರ ಬಿಜೆಪಿ ಯೋಜನೆಗಳನ್ನು ಪುನರ್ ಸ್ಥಾಪಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದರು. ಕೇಂದ್ರ ಸರಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೊಳಿಸಿದೆ. ನೀವು ಕೂಡ ಬೆಂಬಲ ಬೆಲೆ ಯೋಜನೆ ಜಾರಿ ಮಾಡಿ ಎಂದು ಅವರು ಆಗ್ರಹಿಸಿದರು.

 

ರಾಗಿ ಖರೀದಿ ಆರಂಭಿಸಬೇಕು. ಕಿಸಾನ್ ಸಮ್ಮಾನ್ ಯೋಜನೆಯಡಿ ಬಿಜೆಪಿ ಸರ್ಕಾರ ಕೊಡುತ್ತಿದ್ದ 4 ಸಾವಿರ ರೂ. ನೀಡುವುದನ್ನು ಮುಂದುವರಿಸಬೇಕು. ಸಾಧ್ಯವಾದರೆ 6 ಸಾವಿರ ರೂ. ಕೊಟ್ಟು ನಿಮ್ಮ ಸಾಮರ್ಥ್ಯ ತೋರಿಸಿ ಎಂದು ಸವಾಲೆಸೆದರು. ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಬೇಕು. ಗುತ್ತಿಗೆದಾರರು ನಿಮ್ಮ ಮುಖಕ್ಕೆ ಮಂಗಳಾರತಿ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಈ ಸರ್ಕಾರ ರೈತ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ನಮ್ಮ ರೈತರಿಗೆ ನೀರು ಕೊಟ್ಟು ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಕೊಡಿ. ರಾಜ್ಯದ ಹಿತ ಬಲಿ ಕೊಡದಿರಿ ಎಂದು ಅವರು ಒತ್ತಾಯಿಸಿದರು.

 

ಈ ಪ್ರತಿಭಟನೆಯಲ್ಲಿ ರಾಜ್ಯದ ಮಾಜಿ ಸಚಿವ ಅಶ್ವತ್ಥನಾರಾಯಣ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ, ಬೆಂಗಳೂರು ಉತ್ತರ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸತೀಶ್ ಕಡತನಮಲೆ, ಬೆಂಗಳೂರು ಕೇಂದ್ರ ರೈತ ಮೋರ್ಚಾ ಜಿಲ್ಲಾಧ್ಯಕ್ಷ ರುದ್ರಪ್ಪ, ಬೆಂಗಳೂರು ದಕ್ಷಿಣ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಮುತ್ತಸಂದ್ರ, ಮತ್ತು ಪಕ್ಷದ ಮುಖಂಡರು ಭಾಗವಹಿಸಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್