ಕಾಂಗ್ರೆಸ್ ಪಕ್ಷದ ಕಚೇರಿಗೆ ಸಿಟಿ ರವಿ!

Public TV
1 Min Read

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಸಮಯದಲ್ಲೇ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಕಾಂಗ್ರೆಸ್ ಕಚೇರಿಗೆ ತೆರಳಿ ಎಡವಟ್ಟು ಮಾಡಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಕಾಂಗ್ರೆಸ್ ಕಚೇರಿಗೆ ಪ್ರವೇಶಿಸುತ್ತಿದ್ದಂತೆ ಡಿಕೆ ಶಿವಕುಮಾರ್ ಅವರನ್ನು ನೋಡಿ ಅಯ್ಯೋ ಎನ್ನುತ್ತಾ ವಾಪಸ್ ಬಂದಿದ್ದಾರೆ. ಇದನ್ನೂ ಓದಿ: ಕೈ ಶಾಸಕರನ್ನು ಸೆಳೆಯದಂತೆ ಇಂಟರ್‌ನೆಟ್ ಸೇವೆಯನ್ನೇ ಸ್ಥಗಿತಗೊಳಿಸಿದ ರಾಜಸ್ಥಾನ

ಈ ಬಗ್ಗೆ ಮಾತನಾಡಿದ ಸಿಟಿ ರವಿ, ನಾನು ಆಕಸ್ಮಿಕವಾಗಿ ಕಾಂಗ್ರೆಸ್ ಪಕ್ಷದ ಕೊಠಡಿ ಪ್ರವೇಶಿಸಿದ್ದೆ. ಬಾಗಿಲಿನಲ್ಲೇ ಆ ಪಕ್ಷದ ನಾಯಕರನ್ನು ನೋಡಿ ವಾಪಸ್ ಆದೆ ಎಂದು ತಿಳಿಸಿದರು. ನಮ್ಮ ಇಬ್ಬರು ಅಭ್ಯರ್ಥಿಗಳು ಸುಲಭವಾಗಿ ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿ ಆಯ್ಕೆ ಸ್ವಲ್ಪ ಕಠಿಣವಾಗಿದೆ. ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಬಿಜೆಪಿ ಪ್ಲ್ಯಾನ್‌ ಏನು?

Share This Article
Leave a Comment

Leave a Reply

Your email address will not be published. Required fields are marked *