ನವದೆಹಲಿ: ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (CWC) ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಕಾಂಗ್ರೆಸ್ ಕಚೇರಿ ಇಂದಿರಾ ಭವನದಲ್ಲಿ ಸಭೆ ನಡೆಯಲಿದ್ದು, ಮುಂಬರುವ ಪಂಚ ರಾಜ್ಯಗಳ ಚುನಾವಣೆ, ವೋಟ್ ಚೋರಿ, ನ್ಯಾಷನಲ್ ಹೆರಾಲ್ಡ್ ಇತರೆ ವಿಚಾರಗಳ ಬಗ್ಗೆ ಸಿಡಬ್ಲ್ಯೂಸಿ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಅಲ್ಲದೇ ದೇಶಾದ್ಯಾಂತ ಹೋರಾಟ ರೂಪಿಸುವ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ಇದನ್ನೂ ಓದಿ: Mysuru Blast| ಬಲೂನು ಮಾರಾಟಗಾರನಿಗಿತ್ತು 5 ಎಕ್ರೆ ಜಮೀನು!
ಸಭೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ಆಗಮಿಸಿದ್ದಾರೆ. ಕಾರ್ಯಕಾರಿ ಸಭೆಯಲ್ಲಿ ಭಾಗಿಯಾದ ಬಳಿಕ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಪ್ರತ್ಯೇಕ ಮಾತುಕತೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: Mysuru Palace Blast| 20 ಅಡಿ ದೂರದಲ್ಲೇ ಸಿಸಿಟಿವಿ ಇದ್ರೂ ಸ್ಫೋಟದ ದೃಶ್ಯ ಸೆರೆಯಾಗಿಲ್ಲ

